ಬೆಳಗಾವಿ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿಯ ಯಾವ ಬಾಂಬ್‍ಗಳ ಸಹ ಸಿಡಿಯುವುದಿಲ್ಲ, ಅವುಗಳೆಲ್ಲಾ ಠುಸ್ ಆಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಆಯೋಜಿಸಿರುವ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿನ 3 ಲೋಕಸಭೆ ಹಾಗೂ 2 ವಿಧಾನ ಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ 5 ಅಭ್ಯರ್ಥಿಗಳು ಸಹ ಪ್ರಚಂಡ ಬಹುಮತದಿಂದ ಆಯ್ಕೆಯಾಗುತ್ತಾರೆ. ಯಾವುದೇ ಭಿನ್ನಮತ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ ಎಂದು ತಿಳಿಸಿದ್ರು.
ರಮೇಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಬಗ್ಗೆ ಇರುವ ಅಸಮಾಧಾನದ ಬಗ್ಗೆ ಕೇಳಿದ ಪ್ರಶ್ನೆಗೆ ಅವರಿಬ್ಬರೂ ಪಕ್ಷದ ಗೌರವಾನ್ವಿತ ಮುಖಂಡರು ಹಾಗೂ ಸ್ನೇಹಿತರು. ಇದರಲ್ಲಿ ಯಾವುದೇ ಅಪಾರ್ಥ ಮಾಡಿಕೊಳ್ಳುವ ಅವಶ್ಯಕತೆಯಿಲ್ಲ. ಎಲ್ಲರೂ ಒಂದಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv