ಮಂಗಳೂರು: ರಾಜ್ಯದಲ್ಲಿ ಮಾಜಿ ಪ್ರಧಾನಿಗಳ ಇಡೀ ಕುಟುಂಬವೇ ರಾಜಕಾರಣದಲ್ಲಿ ಮುಳುಗಿದೆ. ಮಂಡ್ಯದಲ್ಲಿ ನಿಖಿಲ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಜೆಡಿಎಸ್ ಹೇಳಿದೆ. ಆದ್ದರಿಂದ ಬಿಜೆಪಿ ಯಾರು ಬಂದರೂ ಸ್ವಾಗತ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೆ, ಮಂಡ್ಯದಲ್ಲಿ ಸುಮಲತಾ ಅಂಬರೀಶ್‍ಗೆ ಬಿಜೆಪಿ ಬೆಂಬಲ ನೀಡಲಿದೆ. ಯಾರು ಪಕ್ಷಕ್ಕೆ ಸೇರ್ಪಡೆ ಆದ್ರು ನಮ್ಮ ಸ್ವಾಗತ ಇದೆ. ಪಕ್ಷೇತರವಾಗಿ ನಿಂತರು ಕೂಡ ಬಿಜೆಪಿ ಬೆಂಬಲಿಸಲಿದೆ ಎಂದು ಹೇಳಿದರು.
ಇತ್ತ ವಿಜಯಪುರದಲ್ಲಿ ಮಾತನಾಡಿದ ಗೃಹಸಚಿವ ಎಂಬಿ ಪಾಟೀಲ್, ಮಂಡ್ಯದಿಂದ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಒಳ್ಳೆಯದು. ಅವರ ಪರ ನಾನು ಪ್ರಚಾರ ಮಾಡುತ್ತೇನೆ. ಆದರೆ ಟಿಕೆಟ್ ನೀಡುವ ನಿರ್ಧಾರ ಹೈಕಮಾಂಡ್ ಮಾಡುತ್ತೆ ಎಂದರು.
ಸುಮಲತಾ ಅವರು ಸ್ಪರ್ಧೆ ಮಾಡಲು ಟಿಕೆಟ್ ಕೇಳುವುದು ತಪ್ಪೆನಲ್ಲಾ. ಆದರೆ ಕಾಂಗ್ರೆಸ್ ಮೈತ್ರಿ ರಾಜಕಾರಣದಲ್ಲಿ ಸರ್ಕಾರ ನಡೆಸುತ್ತಿರುವ ಕಾರಣ ನಮಗೆ ಟಿಕೆಟ್ ಕೇಳಿದ್ದೇವೆ. ಅವರು ಸ್ಪರ್ಧೆ ಮಾಡುವ ಬಗ್ಗೆ ನಮಗೆ ಯಾವುದೇ ಅತಂಕವಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv