ಮುಂಬೈ: ಬಿಜೆಪಿ ಅಧಿಕಾರಕ್ಕಾಗಿ ಅಲ್ಲ ಹಿಂದುತ್ವದ ಸಿದ್ಧಾಂತ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ನಮ್ಮ ಜೊತೆಗೆ ಕೈ ಜೋಡಿಸಿದೆ, ಬಿಜೆಪಿ ನಮಗೆ ಬೆಂಬಲ ನೀಡಿದ ಕಾರಣದಿಂದಲೇ ನಾವು ಸರ್ಕಾರ ರಚಿಸುವಂತಾಯಿತು ಎಂದು ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಪ್ರಮಾಣ ವಚನ ಸ್ವೀಕಾರದ ಬಳಿಕ ನೀಡಿದ ಮೊದಲ ಸಂದರ್ಶನದಲ್ಲಿ ಮಾತನಾಡಿರುವ ಅವರು, ಮಹಾವಿಕಾಸ್ ಅಘಾಡಿ ಸರ್ಕಾರದಲ್ಲಿ ಶಿವಸೇನಾ ಶಾಸಕರು ಕೆಲಸ ಮಾಡಲು ಕಷ್ಟಪಡುತ್ತಿದ್ದರು. ಕಾಂಗ್ರೆಸ್ ಮತ್ತು ಎನ್‌ಸಿಪಿ ಪ್ರಾಬಲ್ಯ ಸಾಧಿಸಿತ್ತು. ಉದ್ದವ್ ಠಾಕ್ರೆ ಹಿಂದುತ್ವದ ವಿಚಾರಣದಲ್ಲಿ ಮೊದಲಿನಂತಿರಲಿಲ್ಲ. ಇದನ್ನೂ ಓದಿ: ಐಸಿಯುವಿನಲ್ಲಿ ಲಾಲು ಪ್ರಸಾದ್ ಯಾದವ್‍ಗೆ ಚಿಕಿತ್ಸೆ – ಆರೋಗ್ಯ ವಿಚಾರಿಸಿದ ಮೋದಿ
ಹಿಂದುತ್ವಕ್ಕೆ ಶಿವಸೇನಾ ಸೇರಿ ಪಕ್ಷೇತರ ಶಾಸಕರು ಮನ್ನಣೆ ನೀಡಿದರು. ಬಿಜೆಪಿ ಬರೀ ಅಧಿಕಾರಕ್ಕಾಗಿ ಇದನ್ನೆಲ್ಲ ಮಾಡದೇ ಅಭಿವೃದ್ಧಿ ಮತ್ತು ಹಿಂದುತ್ವಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಶಾಸಕರು ಬೆಂಬಲ ನೀಡಿದ್ದಾರೆ. ನನ್ನ ಸಿಎಂ ಮಾಡುವ ಮೂಲಕ ಜನರಿಗೆ ಅಧಿಕಾರ ಮುಖ್ಯವಲ್ಲ ಎಂದು ಸಾಬೀತುಪಡಿಸಿದೆ.
ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯಿರಿ, ಅಭಿವೃದ್ಧಿಯತ್ತ ಕೊಂಡೊಯ್ಯಿರಿ, ಹೊಸ ಕಾರ್ಯಗಳನ್ನು ಆರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬೆಂಬಲ ಇರಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಬಿಸಿ – ಗೃಹಬಳಕೆಯ LPG ಸಿಲಿಂಡರ್ ಬೆಲೆ 50 ರೂ. ಏರಿಕೆ
ಇದು ಬಹಳ ದೊಡ್ಡ ವಿಷಯ, ಕೇಂದ್ರ ಸರ್ಕಾರ ನಮ್ಮ ಜೊತೆಗೆ ಇದೆ. ಮುಖ್ಯವಾಗಿ ಯಾವುದೇ ತಪ್ಪು ಮಾಡಿಲ್ಲ. ಚುನಾವಣೆ ಪೂರ್ವದಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಇತ್ತು. ನಾವು ಈಗ ಅದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು 200 ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದ ಅವರು, ಫಡ್ನವಿಸ್ ಡಿಸಿಎಂ ಆಗಿರುವುದು ದೊಡ್ಡ ಮನಸ್ಸು ಎಂದಿದ್ದಾರೆ.