ಜೈಪುರ: ಜಾಗತಿಕವಾಗಿ ಹೆಚ್ಚುತ್ತಿರುವ ಕೊರೊನಾ (Corona) ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನದಲ್ಲಿ (Rajasthan) ಬಿಜೆಪಿ (BJP) ‘ಜನ ಆಕ್ರೋಶ ಯಾತ್ರೆ’ಯನ್ನು (Jan Aakrosh Yatra) ಅಮಾನತುಗೊಳಿಸಲು ನಿರ್ಧರಿಸಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಕೋವಿಡ್ ನಿಯಮಗಳನ್ನು ಅನುಸರಿಸಿ ಬಿಜೆಪಿ ಯಾತ್ರೆಯನ್ನು ಮುಂದುವರಿಸಲು ನಿರ್ಧರಿಸುವ ಮೂಲಕ ಯೂ ಟರ್ನ್ ಹೊಡೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಮಾತನಾಡಿ, ಜನ ಆಕ್ರೋಶ ಯಾತ್ರೆಗೆ ಸಂಬಂಧಿಸಿದಂತೆ ಕೆಲ ಗೊಂದಲಗಳಾಗಿತ್ತು. ಅದನ್ನು ಈಗ ಸರಿಪಡಿಸಲಾಗಿದೆ. ಜನ ಆಕ್ರೋಶ ಯಾತ್ರೆ ಅಮಾನತನ್ನು ಹಿಂತೆಗೆದುಕೊಳ್ಳಲಾಗಿದ್ದು, ನಿಗದಿತ ವೇಳಾಪಟ್ಟಿಯಂತೆ ಸಭೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಗಾ ಅಭಿವೃದ್ಧಿಗೆ 6 ಕೋಟಿ ದೇಣಿಗೆ ನೀಡಿದ ಜನಾರ್ದನ ರೆಡ್ಡಿ
ಕಾಂಗ್ರೆಸ್ ಸರ್ಕಾರವಿರುವ ರಾಜಸ್ಥಾನದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಈ ಹಿನ್ನೆಲೆ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಡಿಸೆಂಬರ್ 1 ರಂದು ರಾಜ್ಯಾದ್ಯಂತ ಜನ ಆಕ್ರೋಶ ಯಾತ್ರೆಯನ್ನು ಪ್ರಾರಂಭಿಸಿದರು. ಆದರೆ ಕೋವಿಡ್ ಹೆಚ್ಚಳದ ಭೀತಿಯ ಹಿನ್ನೆಲೆ ಯಾತ್ರೆಯನ್ನು ಸ್ಥಗಿತಗೊಳಿಸುವುದಾಗಿ ಪಕ್ಷ ಘೋಷಿಸಿತ್ತು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಕೇಂದ್ರಕ್ಕೆ ಕೊರೊನಾ ಒಂದು ನೆಪ: ರಾಹುಲ್ ಗಾಂಧಿ