– ಪಟ್ಟಿಯಲ್ಲಿ ಮೋದಿ, ಅಮಿತ್ ಶಾ ಹೆಸರು?
ನವದೆಹಲಿ: ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ (Lok Sabha) ದಿನಾಂಕ ಘೋಷಣೆಗೆ ಮುಂಚಿತವಾಗಿ ಬಿಜೆಪಿ (BJP) ಗುರುವಾರ 100 ಅಭ್ಯರ್ಥಿಗಳ ಹೆಸರಿನ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.
Advertisement
ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಇಬ್ಬರ ಹೆಸರೂ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆಬ್ರವರಿ 29 ರಂದು ಸಭೆ ಸೇರುವ ಸಾಧ್ಯತೆಯಿದೆ. ಅದರ ನಂತರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಜು.1 ರಿಂದ ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ
Advertisement
Advertisement
ಮೊದಲ ಪಟ್ಟಿಯು ನಿರ್ಣಾಯಕವಾಗಿದೆ. ಏಕೆಂದರೆ ಆಡಳಿತ ಪಕ್ಷವು 543 ಲೋಕಸಭಾ ಸ್ಥಾನಗಳಲ್ಲಿ 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಎನ್‌ಡಿಎಗೆ 400 ಸ್ಥಾನಗಳನ್ನು ಗಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.
Advertisement
ಪ್ರಧಾನಿ ಮೋದಿ ಅವರು ವಾರಣಾಸಿಯಿಂದ ಸಂಸದರಾಗಿದ್ದಾರೆ. ಅವರು ಎರಡು ಬಾರಿ ಗೆದ್ದಿದ್ದಾರೆ. ಮೋದಿ 2014 ರಲ್ಲಿ 3.37 ಲಕ್ಷ ಮತಗಳ ಭಾರೀ ಅಂತರದಿಂದ ಚುನಾಯಿತರಾಗಿದ್ದರು. 2019 ರಲ್ಲಿ ಅದನ್ನು 4.8 ಲಕ್ಷಕ್ಕೆ ಹೆಚ್ಚಿಸಿದರು. ಅಮಿತ್ ಶಾ ಅವರು 2019 ರ ಚುನಾವಣೆಯಲ್ಲಿ ಗಾಂಧಿನಗರದಿಂದ ಸ್ಪರ್ಧಿಸಿದ್ದರು. ಇದನ್ನೂ ಓದಿ: ಮದುವೆಯಾಗುವುದಾಗಿ 13 ವರ್ಷಗಳ ಕಾಲ ನಿರಂತರ ಅತ್ಯಾಚಾರ ಆರೋಪ – ನಟ ಮನೋಜ್ ರಜಪೂತ್ ಅರೆಸ್ಟ್
ಕಳೆದ ವಾರ, 370 ಸ್ಥಾನಗಳನ್ನು ಗೆಲ್ಲುವ ಪಕ್ಷದ ಗುರಿಯನ್ನು ಈಡೇರಿಸಲು ಶ್ರದ್ಧೆಯಿಂದ ಕೆಲಸ ಮಾಡಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ ನೀಡಿದ್ದರು. ಮುಂದಿನ 100 ದಿನಗಳು ನಿರ್ಣಾಯಕವಾಗಿದೆ ಎಂದು ತಿಳಿಸಿದ್ದರು.
ಮುಂದಿನ 100 ದಿನಗಳಲ್ಲಿ ನಾವೆಲ್ಲರೂ ಪ್ರತಿಯೊಬ್ಬ ಹೊಸ ಮತದಾರರನ್ನು, ಪ್ರತಿಯೊಬ್ಬ ಫಲಾನುಭವಿ, ಪ್ರತಿ ಸಮುದಾಯವನ್ನು ತಲುಪಬೇಕು. ನಾವು ಎಲ್ಲರ ವಿಶ್ವಾಸ ಗೆಲ್ಲಬೇಕು. ಎನ್‌ಡಿಎ 400 ಕ್ಕೆ ಕೊಂಡೊಯ್ಯಲು, ಬಿಜೆಪಿ 370 (ಸೀಟು) ಗಡಿ ದಾಟಬೇಕು ಎಂದು ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ಹೇಳಿದ್ದರು. ಇದನ್ನೂ ಓದಿ: ತಮಿಳುನಾಡಿನ ಕಾಂಗ್ರೆಸ್ ಶಾಸಕಿ ಬಿಜೆಪಿ ಸೇರ್ಪಡೆ