ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬಿಜೆಪಿ (BJP) ತಂಡಗಳ ಬರಗಾಲ ಅಧ್ಯಯನ ಸಂಬಂಧಿತ ವರದಿಯನ್ನು ಶೀಘ್ರವೇ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ (N Ravikumar) ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬರಗಾಲದ ಅಧ್ಯಯನಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು 6 ತಂಡಗಳನ್ನು ರಚಿಸಿದ್ದರು. ತಂಡಗಳು ಜಿಲ್ಲೆಗಳು ಮಾತ್ರವಲ್ಲದೇ ಕೆಲವು ತಾಲೂಕುಗಳಿಗೂ ಭೇಟಿ ನೀಡಿವೆ ಎಂದು ವಿವರಿಸಿದರು. ಇದನ್ನೂ ಓದಿ: ಮರಣದಂಡನೆ: ಗಲ್ಲು ಶಿಕ್ಷೆ ಬದಲು ನೋವುರಹಿತ ಪರ್ಯಾಯ ವಿಧಾನಕ್ಕೆ ಸುಪ್ರೀಂ ಕೋರ್ಟ್ ನಕಾರ
ರಾಜ್ಯದಲ್ಲಿ ಭೀಕರ ಬರಗಾಲ ಇದೆ. ರಾಜ್ಯ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂಬ ವಿಚಾರವನ್ನು ಗಮನಕ್ಕೆ ತರಲು ಉದ್ದೇಶಿಸಲಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಅದರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಈ ಸಂಬಂಧ ವರದಿಯನ್ನು ಸಿದ್ಧಪಡಿಸಿದ್ದು, ಅದನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ಸಲ್ಲಿಸುತ್ತಿರುವುದಾಗಿ ಹೇಳಿದರು. ಇದನ್ನೂ ಓದಿ: ನನ್ನನ್ನು ನೆಮ್ಮದಿಯಿಂದ ಸಾಯಲು ಬಿಡಿ; ತ್ವಿಶಾ ಸಾಯುವ 90 ನಿಮಿಷಗಳಿಗೂ ಮುನ್ನ ಆಗಿದ್ದೇನು?

