ಭಾವನಾತ್ಮಕ ವಿಚಾರ ಮುನ್ನಲೆಗೆ ತಂದು ಬಿಜೆಪಿ ತಪ್ಪು ಮುಚ್ಚಿಕೊಳ್ಳಲು ಯತ್ನಿಸುತ್ತಿದೆ: ಈಶ್ವರ್ ಖಂಡ್ರೆ

Public TV
1 Min Read
eshwar khandre

ಕಲಬುರಗಿ: ಗಲಭೆಗಳಿಗೆ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತರುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಗಲಾಟೆ ವಿಷಯವಾಗಿ ಪ್ರತಿಯೊಬ್ಬರೂ ಸಾಮರಸ್ಯ ಕಾಪಾಡಬೇಕು. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಭಾವನಾತ್ಮಕ ವಿಷಯಗಳನ್ನು ಮುನ್ನಲೆಗೆ ಬಿಟ್ಟು ಬಿಜೆಪಿ ತನ್ನ ತಪ್ಪುಗಳನ್ನು ಮುಚ್ಚಿ ಹಾಕುತ್ತಿದೆ. ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ- ಹಲಾಲ್ ಪ್ರಚೋದಿತ ಘಟನೆಯೇ? – ಸಿ.ಟಿ.ರವಿ

Eshwara Khandre

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ ಖಂಡ್ರೆ, ರಾಜ್ಯದಲ್ಲಿ ಬಿಜೆಪಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಇದಕ್ಕೆ ಬಿಜೆಪಿಯವರೇ ಕಾರಣ. ಮಾಜಿ ಸಚಿವ ಈಶ್ವರಪ್ಪ ಹೆಸರು ಬರೆದು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಬೇಕಿತ್ತು. ಆದರೆ ಸರ್ಕಾರ ಈಶ್ವರಪ್ಪನನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ನಾವು ಹಿಂದೂ ಪರ-ವಿರೋಧವೂ ಅಲ್ಲ, ಮುಸಲ್ಮಾನ್, ಕ್ರಿಶ್ಚಿಯನ್ ಪರ-ವಿರೋಧವೂ ಅಲ್ಲ: ಸಿದ್ದರಾಮಯ್ಯ
ಈಶ್ವರಪ್ಪನನ್ನು ಈ ಕೂಡಲೆ ಬಂಧಿಸುವಂತೆ ಆಗ್ರಹಿಸಿದ ಈಶ್ವರ್ ಖಂಡ್ರೆ, ತನಿಖೆ ಪ್ರಾರಂಭವಾಗುವ ಮುನ್ನವೇ ಈಶ್ವರಪ್ಪ ತಪ್ಪು ಮಾಡಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಬಿಜೆಪಿಗರ ವರ್ತನೆಯಿಂದಲೇ ರಾಜ್ಯದ ಜನತೆ ಎಲ್ಲವನ್ನೂ ತಿಳಿದುಕೊಳ್ಳುತ್ತಾರೆ ಎಂದು, ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿದರು.

Share This Article
Leave a Comment

Leave a Reply

Your email address will not be published. Required fields are marked *