ಚಾಮರಾಜನಗರ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿಯು ವಾಮಮಾರ್ಗ ಅನುಸರಿಸುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಆರೋಪಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಐಟಿ ಇಲಾಖೆ ದುರ್ಬಳಕೆ ಮಾಡಿಕೊಂಡು ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರ ಮೇಲೆ ದಾಳಿ ನಡೆಸುತ್ತಿದೆ. ಇದು ಬಿಜೆಪಿಯವರ ಸೇಡಿನ ರಾಜಕಾರಣವೇ ಹೊರತು ಬೇರೇನೂ ಅಲ್ಲ. ಎಲ್ಲದರ ಬಗ್ಗೆ ನಾಡಿನ ಜನತೆಗೆ ಗೊತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಏನೇ ಮಾಡಿದರೂ, ಅದನ್ನು ಎದುರಿಸುವ ಶಕ್ತಿ ಡಿಕೆಶಿ ಅವರಿಗಿದೆ ಎಂದು ಹೇಳಿದರು.
Advertisement
Advertisement
ಡಿಕೆಶಿಯವರು ತೆರಿಗೆಯನ್ನು ಕಟ್ಟಿ ಕಾನೂನು ಮೂಲಕವೇ ಆಸ್ತಿ ಸಂಪಾದನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದವರಿಗಿಂತಲೂ ಬಿಜೆಪಿಯವರು ಹೆಚ್ಚಿನ ಭ್ರಷ್ಟಾಚಾರ ಮಾಡಿದ್ದಾರೆ. ಆದರೆ ಅವರ ಮನೆಯ ಮೇಲೆ ದಾಳಿ ಮಾಡುವ ಕೆಲಸವನ್ನು ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಮಾಡುತ್ತಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
ಸಂಸದೆ ಶೋಭಾ ಕರಂದ್ಲಾಜೆಯವರ ತಾಕತ್ತಿದ್ದರೆ ಶಾಸಕರು ಹಾಗೂ ಸಚಿವರನ್ನು ಉಳಿಸಿಕೊಳ್ಳಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ಬಿಜೆಪಿಯವರು ಮಾಡಿದ ಆಪರೇಷನ್ ಕಮಲಕ್ಕೆ ತುತ್ತಾಗಿದ್ದ ಶಾಸಕರ ಪರಿಸ್ಥಿತಿ ಇವತ್ತು ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಯಾರಾದರೂ ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಸಾಧ್ಯವೇ. ಯಾರು ಕೂಡ ಬಿಜೆಪಿ ಪಕ್ಷ ಸೇರುವುದಿಲ್ಲ ಮತ್ತು ಕ್ಷೇತ್ರದ ಮತದಾರರಿಗೆ ಅನ್ಯಾಯ ಮಾಡುವುದಿಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ:ಕಾಂಗ್ರೆಸ್ಸಿಗೆ ತಾಕತ್ತಿದ್ರೆ ಅವ್ರ ಶಾಸಕರು, ಸಚಿವರನ್ನ ಹಿಡಿದಿಟ್ಟುಕೊಳ್ಳಲಿ: ಶೋಭಾ ಕರಂದ್ಲಾಜೆ
Advertisement
ಸೋಮವಾರದ ಭಾರತ್ ಬಂದ್ ಕುರಿತು ಮಾತನಾಡಿ, ಚಾಮರಾಜನಗರ ಜಿಲ್ಲೆಯಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದ್ದು, ಈಗಾಗಲೇ ಬಂದ್ ಆಚರಿಸಲು ನಿರ್ಧರಿಸಲಾಗಿದೆ. ನಮಗೆ ಖಾಸಗಿ ಬಸ್ ಮಾಲೀಕರು, ಆಟೋ ಮಾಲೀಕರ ಸಂಘ, ಥಿಯೇಟರ್ ಮಾಲೀಕರ ಸಂಘ, ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಬೆಂಬಲ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಪೆಟ್ರೋಲಿಯಂ ಉತ್ಪನ್ನಗಳು ಏರಿಕೆಯಾಗುತ್ತಲೇ ಇದೆ. ತರಕಾರಿ, ಹಾಲು ಎಲ್ಲದರ ಬೆಲೆಗಳು ಗಗನಕ್ಕೇರಿದೆ. ಹೀಗಾಗಿ ಬಂದ್‍ಗೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಕರ್ನಾಟಕದಲ್ಲಿ ಬಹುತೇಕ ಬಂದ್ ಖಚಿತ – ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಸಾರಿಗೆ ಸ್ತಬ್ಧ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv