ನವದೆಹಲಿ: ಫೆಬ್ರವರಿ 14ಕ್ಕೆ ನಿಗದಿಯಾಗಿರುವ ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಮುಂದೂಡುವಂತೆ ಹಲವು ರಾಜಕೀಯ ಪಕ್ಷಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿವೆ. ಈ ಸಂಬಂಧ ಮುಖ್ಯಮಂತ್ರಿ ಚರಣ್‍ಜಿತ್ ಎಸ್ ಚನ್ನಿ ಅವರು ಚುನಾವಣಾ ಆಯೋಗಕ್ಕೆ ವಿಸ್ತೃತ ಪತ್ರ ಬರೆದಿದ್ದಾರೆ.
ಪಂಜಾಬ್ ನಲ್ಲಿ ಫೆ.16 ರಂದು ಗುರು ರವಿದಾಸ್ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. 32% ಮತದಾರರಿರುವ ಪರಿಶಿಷ್ಟ ಜಾತಿಯ ಸಮುದಾಯ ಈ ಜನ್ಮದಿನವನ್ನು ವಿಶೇಷ ಆಚರಿಸುತ್ತದೆ. ಇದಕ್ಕಾಗಿ ಅವರು ಫೆಬ್ರವರಿ 10ರಿಂದ 16 ವರೆಗೂ ಉತ್ತರಪ್ರದೇಶದ ವಾರಣಾಸಿಗೆ ತೆರಳುತ್ತಾರೆ.
Advertisement
Advertisement
ಫೆಬ್ರವರಿ 14 ರಂದು ಮತದಾನಕ್ಕೆ ದಿನಾಂಕ ನಿಗದಿಯಾಗಿದ್ದು ಈ ಅವಧಿಯಲ್ಲಿ ಪಂಜಾಬ್‍ನಲ್ಲಿ ಪರಿಶಿಷ್ಠ ಜಾತಿಯ ಜನರು ಅನುಪಸ್ಥಿತಿಯಲ್ಲಿರಲಿದ್ದಾರೆ. ದೊಡ್ಡ ಪ್ರಮಾಣದ ಮತದಾರರ ಅನುಪಸ್ಥಿತಿಯಲ್ಲಿ ಮತದಾನ ನಡೆಸುವುದು ಸೂಕ್ತವಲ್ಲ ಎಂದು ತಮ್ಮ ಪತ್ರದಲ್ಲಿ ಚನ್ನಿ ಹೇಳಿದ್ದಾರೆ. ಈ ಹಿನ್ನಲೆ ಫೆಬ್ರವರಿ 14 ರಂದು ನಿಗದಿಯಾಗಿರುವ ಮತದಾನದ ದಿನಾಂಕವನ್ನು ಮುಂದೂಡಬೇಕು, ಇದಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಮತ ಕೂಡಾ ಇದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?
Advertisement
Advertisement
ಚುನಾವಣೆ ಮುಂದೂಡಿಕೆ ಮನವಿ ಹಿನ್ನೆಲೆ ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಲಿದ್ದು, ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಚುನಾವಣೆ ಮುಂದೂಡಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದು, ಮಧ್ಯಾಹ್ನದ ಬಳಿಕ ಅಧಿಕೃತ ಆದೇಶ ಹೊರ ಬರುವ ನಿರೀಕ್ಷೆಗಳಿದೆ. ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್ ನಿರಾಕರಣೆ- ಚನ್ನಿ ಸಹೋದರ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ