ಲಕ್ನೋ: ರಾಜ್ಯದಲ್ಲಿ ಹಿಂದಿನ ಸರ್ಕಾರಗಳು ಸಾರ್ವಜನಿಕ ಹಣವನ್ನು ಕಬ್ರಿಸ್ತಾನ್‌ಗೆ ವಿನಿಯೋಗಿಸುತ್ತಿದ್ದವು. ಆದರೆ ನಮ್ಮ ಬಿಜೆಪಿ ಸರ್ಕಾರ ಹಣವನ್ನು ದೇವಾಲಯಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
Advertisement
ದೀಪೋತ್ಸವ ಆಚರಣೆ ಹಿನ್ನೆಲೆಯಲ್ಲಿ ರಾಮ ಕಥಾ ಉದ್ಯಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. ಜೊತೆಗೆ ಉತ್ತರ ಪ್ರದೇಶದಲ್ಲಿರುವ 500 ದೇವಾಲಯಗಳು ಹಾಗೂ ಇತರ ಧಾರ್ಮಿಕ ಸ್ಥಳಗಳ ನವೀಕರಣಕ್ಕಾಗಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನೋ ಪಟಾಕಿ ಎಂದವ್ರು 3 ದಿನ ಕಾರ್ ಬಳಸಬೇಡಿ, ನಡೆದುಕೊಂಡು ಹೋಗಿ: ಕಂಗನಾ ರಣಾವತ್
Advertisement
ಕಬ್ರಿಸ್ತಾನ್ ಮೇಲೆ ಪ್ರೀತಿ ಇರುವವರು ಸಾರ್ವಜನಿಕ ಹಣವನ್ನು ಅಲ್ಲಿ ಖರ್ಚು ಮಾಡುತ್ತಾರೆ. ಆದರೆ ಧರ್ಮ ಮತ್ತು ಸಂಸ್ಕೃತಿ ಮೇಲೆ ಪ್ರೀತಿ ಇರುವವರು ಜನರ ಹಣವನ್ನು ಅವರಿಗಾಗಿಯೇ ಖರ್ಚು ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Advertisement
Advertisement
30 ವರ್ಷಗಳ ಹಿಂದೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಅಪರಾಧ ಎಂದು ಪರಿಗಣಿಸಲಾಗುತ್ತಿತ್ತು. ಆಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಈಗಿನ ವಿರೋಧ ಪಕ್ಷಗಳು ತಮಗೆ ಬೇಕಾದವರಿಗೆ ಗನ್ ತರಬೇತಿ ನೀಡಿದ್ದರು ಎಂದು ಆರೋಪಿಸಿದ್ದಾರೆ.
2023ರ ಹೊತ್ತಿಗೆ ರಾಮಮಂದಿರ ನಿರ್ಮಾಣ ಕಾರ್ಯ ಮುಗಿಯಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಬ್ಲೂಟೂತ್ ಬಳಸಿ ಕಾನ್‍ಸ್ಟೇಬಲ್ ಪರೀಕ್ಷೆ ಬರೆಯಲು ಯತ್ನ – ಸಿಐಡಿಗೆ ತನಿಖೆ ವಹಿಸಿದ ರಾಜ್ಯ ಗೃಹ ಇಲಾಖೆ
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಕುರಿತು ಮಾತನಾಡಿ, ರಾಜ್ಯದಲ್ಲಿ ಈ ಯೋಜನೆಯನ್ನು ಮುಂದುವರಿಸಲಾಗುವುದು. ಈ ಯೋಜನೆಯಿಂದ ರಾಜ್ಯದ ಬಡ ಜನರು ಮುಂದಿನ ವರ್ಷದ ಹೋಳಿ ಹಬ್ಬದವರೆಗೂ ಉಚಿತವಾಗಿ ಪಡಿತರ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಬಡ ಜನರಿಗೆ ಸಹಕಾರಿಯಾಗುವಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸಿದೆ. ನವೆಂಬರ್‌ಗೆ ಉಚಿತ ಪಡಿತರ ವಿತರಣೆ ಕೊನೆಗೊಳ್ಳಬೇಕಿತ್ತು. ಆದರೆ ಸಾಂಕ್ರಾಮಿಕ ಇನ್ನೂ ಕೊನೆಯಾಗಿಲ್ಲ. ಹೀಗಾಗಿ ನಮ್ಮ ಸರ್ಕಾರ ಮುಂದಿನ ವರ್ಷದ ಮಾರ್ಚ್‌ವರೆಗೂ ಉಚಿತವಾಗಿ ಪಡಿತರ ವಿತರಿಸಲಿದೆ ಎಂದು ಹೇಳಿದ್ದಾರೆ.
ಈ ಯೋಜನೆ ವಿಸ್ತರಣೆಯಿಂದ ರಾಜ್ಯದ 15 ಕೋಟಿ ಬಡಜನರಿಗೆ ಅನುಕೂಲವಾಗಲಿದೆ. ಪಡಿತರದೊಂದಿಗೆ ಉಪ್ಪು, ಸಕ್ಕರೆ, ಬೇಳೆ ಮತ್ತು ಅಡುಗೆ ಎಣ್ಣೆಯನ್ನೂ ಜನರಿಗೆ ನೀಡಲಾಗುತ್ತಿದೆ ಎಂದಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, 661 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.