ಮಂಗಳೂರು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ (Delhi Election Results) ಬಿಜೆಪಿ ಭರ್ಜರಿ ಜಯಗಳಿಸಿರುವ ಹಿನ್ನೆಲೆಯಲ್ಲಿ ಮಂಗಳೂರಲ್ಲಿ (Mangaluru) ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ವಿಜಯೋತ್ಸವ ಆಚರಿಸಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ನಶೆ ಇಳಿಸಿದ ದೆಹಲಿ ಜನ, ಎಣ್ಣೆ ಏಟಿಗೆ ಎಎಪಿಗೆ ಸೋಲಿನ `ಕಿಕ್’
ಶಾಸಕ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಮೇಯರ್ ಮನೋಜ್ ಕುಮಾರ್ ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು.
27 ವರ್ಷಗಳ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದ ಜಯ ಸಾಧಿಸಿದೆ. ಒಂದು ದಶಕ ಆಡಳಿತ ನಡೆಸಿದ ಎಎಪಿ ಹೀನಾಯ ಸೋಲನುಭವಿಸಿದೆ. ಕೇಜ್ರಿವಾಲ್ ಸೇರಿದಂತೆ ಪಕ್ಷದ ಘಟನಾನುಘಟಿ ನಾಯಕರು ಮಕಾಡೆ ಮಲಗಿದ್ದಾರೆ. ಇದನ್ನೂ ಓದಿ: ದೆಹಲಿ ಚುನಾವಣಾ ಫಲಿತಾಂಶ ಬಿಜೆಪಿ ಮೇಲಿನ ನಂಬಿಕೆ ವೃದ್ಧಿಸಿದೆ: ಸುಧಾಕರ್ ರೆಡ್ಡಿ
ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 48, ಎಎಪಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಮೂರನೇ ಬಾರಿಯೂ ಶೂನ್ಯ ಸಾಧನೆ ಮಾಡಿದೆ.