ಹುಬ್ಬಳ್ಳಿ: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ (BJP) ತಾನೇ ಸೋತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಬಿಜೆಪಿ ಕುರಿತು ಲೇವಡಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಪಾರ್ಟಿಗೆ ನಾನು ಅನ್‌ಕಂಡೀಷನ್ ಆಗಿ ಬಂದಿದ್ದೇನೆ. ಕ್ಯಾಬಿನೆಟ್‌ನಲ್ಲಿ ನಾನು ಮಿನಿಸ್ಟರ್ ಆಗಬೇಕೆಂದು ಜನರ ಅಭಿಲಾಷೆಯಿತ್ತು. ಹಲವು ಕಾರಣದಿಂದ ಅದು ಆಗಿಲ್ಲ. ಇನ್ನೂ ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನವನ್ನು ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ. ಈಗಿನ ಸಂಪುಟ ರಚನೆಯ ನಂತರ ಕೂತು ಚರ್ಚಿಸುವ ಬಗ್ಗೆ ಮಾತಾಗಿದೆ ಎಂದರು. ಇದನ್ನೂ ಓದಿ: New Parliament Building ಉದ್ಘಾಟನೆ – ಈ ಭವನ ಹಿರಿಮೆ, ವಿಶ್ವಾಸದ ಸಂಕೇತ: ಮೋದಿ
Advertisement
Advertisement
ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಲಿಲ್ಲ. ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ಯವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್‌ಗೆ ಜನ ಬೆಂಬಲ ನೀಡಿದ್ದಾರೆ. ನಾನು ಯಾವುದೇ ಷರತ್ತು ವಿಧಿಸಿ ಕಾಂಗ್ರೆಸ್ ಸೇರಿರಲಿಲ್ಲ. ಆದರೆ ನಾನು ಮಾಡಿದ ಸಂಘಟನೆ ನೋಡಿ ಹಲವಾರು ಜನ ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಆದರೆ ಸದ್ಯ ಒತ್ತಡದ ಪರಿಸ್ಥಿತಿಯಿದೆ. ಹೀಗಾಗಿ ಮುಂದೆ ಒಳ್ಳೆಯ ಸ್ಥಾನ ನೀಡುವ ಭರವಸೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡವೆಂದ ಶಾಸಕ ಪುಟ್ಟರಂಗಶೆಟ್ಟಿ!
Advertisement
ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಇನ್ನೂ ಸಾಕಷ್ಟು ಅವಕಾಶಗಳಿವೆ. ಅದನ್ನು ನೀಡುತ್ತಾರೆ ಎಂಬ ಭರವಸೆಯಿದೆ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಚರ್ಚೆಗಳು ನಡೆದಿಲ್ಲ. ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತದೆ ಅದನ್ನು ನಿಭಾಯಿಸುತ್ತೇನೆ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿದೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಒಂದು ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನೆಗೂ ಮುನ್ನ ಕಾರ್ಮಿಕರನ್ನು ಸನ್ಮಾನಿಸಿದ ಮೋದಿ
Advertisement
ಗ್ಯಾರಂಟಿ ಅನುಷ್ಠಾನ ಮಾಡಲು ಸ್ವಲ್ಪ ಸಮಯ ಬೇಕಾಗುತ್ತದೆ. ಪ್ರತಿಪಕ್ಷ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಹೊಸ ಸರ್ಕಾರ ಬಂದಿದೆ. ರಾಜಕಾರಣದಲ್ಲಿ ತಾಳ್ಮೆ ಬೇಕಾಗುತ್ತದೆ. ಎಂಪಿ ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ. ಇಂದಿನ ನೂತನ ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಕರೆಯಬೇಕಿತ್ತು ಎಂದು ಅಸಮಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಮನಸೆಳೆದ ಸರ್ವಧರ್ಮ ಸಮ್ಮಿಳನ
ಶೆಟ್ಟರ್ ಸೋಲಿಗೆ ಕಾರಣ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸೋಲಿಗೆ ಕಾರಣವನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ. ಹಿರಿಯ ನಾಯಕರೊಂದಿಗೆ ಚರ್ಚೆ ಆಗಿಲ್ಲ. ಸವದಿ (Laxman Savadi) ಹಾಗೂ ನನಗೆ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಆಗಲಿಲ್ಲ. ಬಿಜೆಪಿಯಲ್ಲಿ ಪಕ್ಷ ಕಟ್ಟುವಂತಹವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿಗೆ ತರಲು ಕಾರಣವಾದವರು ಈಗ ಎಲ್ಲಿದ್ದಾರೆ? ಇನ್ನೂ ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ಈಗ ನಾಪತ್ತೆಯಾಗಿದ್ದಾರೆ ಎಂದು ಪರೋಕ್ಷವಾಗಿ ಬಿಎಲ್ ಸಂತೋಷ್‌ಗೆ (B.L.Santhosh) ಟಾಂಗ್ ನೀಡಿದರು. ಇದನ್ನೂ ಓದಿ: ಸಂಸತ್‍ನಲ್ಲಿ ಚಿನ್ನದ ರಾಜದಂಡ ಪ್ರತಿಷ್ಠಾಪನೆ
ವಿರೋಧ ಪಕ್ಷದ ನಾಯಕನನ್ನು ಆರಿಸಲು ಯಾರೂ ಇಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು. ಆರ್‌ಎಸ್‌ಎಸ್ ಬಜರಂಗದಳ ಬ್ಯಾನ್ ಯಾರು ಮಾಡಿದ್ದಾರೆ? ನಾನು ಕಾಂಗ್ರೆಸ್ ಸರ್ಕಾರದ ವಕ್ತಾರ ಅಲ್ಲಾ ಎಂದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಪತ್ನಿ ಮರು ನೇಮಕ ಮಾಡ್ತೀವಿ – ಸಿದ್ದರಾಮಯ್ಯ