ಪಣಜಿ: ಗೋವಾದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಗೆಲ್ಲಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ 18-22 ಸ್ಥಾನಗಳನ್ನು ಪಡೆದು ಬಿಜೆಪಿ ಸರ್ಕಾರ ರಚಿಸಲಿದೆ. ಜನರು ಡಬಲ್ ಎಂಜಿನ್ ಸರ್ಕಾರವನ್ನು ಮತ್ತೊಮ್ಮೆ ಆಯ್ಕೆ ಮಾಡುತ್ತಾರೆ ಎಂದು ನಾನು ನಂಬಿದ್ದೇನೆ. ಡಬಲ್ ಎಂಜಿನ್ ಸರ್ಕಾರದ ಮೂಲಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ಬಿಜೆಪಿ ಸರ್ಕಾರಕ್ಕೆ ಜನ ಮೊದಲ ಆದ್ಯತೆಯನ್ನು ನೀಡುತ್ತಾರೆ. ಈ ಅಡಿಯಲ್ಲಿ ನಾವು ಆತ್ಮನಿರ್ಭರ ಭಾರತ ಸ್ವಯಂಪೂರ್ಣ ಗೋವಾವನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ
ಚುನಾವಣಾ ಸಮೀಕ್ಷೆ ಪ್ರಕಾರ, ಬಿಜೆಪಿ ಪಕ್ಷ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಮತ್ತು ಪಂಜಾಬ್‍ನಲ್ಲಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆದಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ರೇಣುಕಾಚಾರ್ಯ, ಪ್ರತಾಪಸಿಂಹ ವಿರುದ್ಧದ 4 ಕೇಸ್ ವಾಪಸ್ ಪಡೆದ ಸರ್ಕಾರ- ಹೈಕೋರ್ಟ್ ಗರಂ