ದಿಸ್ಪುರ್: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ (BJP) ದೇಶಾದ್ಯಂತ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದು ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಸ್ಸಾಂನ (Assam) ದಿಬ್ರುಗಢದಲ್ಲಿ ಬಿಜೆಪಿ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಈಶಾನ್ಯ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ. ಅಲ್ಲದೇ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ: ಅಮಿತ್ ಶಾ
Advertisement
Advertisement
ಈಶಾನ್ಯವನ್ನು ಒಂದು ಕಾಲದಲ್ಲಿ ಕಾಂಗ್ರೆಸ್‌ನ (Congress) ಕೋಟೆ ಎಂದು ಪರಿಗಣಿಸಲಾಗಿತ್ತು. ಆದರೆ ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ ಯಾತ್ರೆಯ ಹೊರತಾಗಿಯೂ ಪಕ್ಷವು ಮೂರು ರಾಜ್ಯಗಳಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದೆ. ಇತ್ತೀಚಿಗಷ್ಟೇ ಮೇಘಾಲಯ, ತ್ರಿಪುರ ಮತ್ತು ನಾಗಾಲ್ಯಾಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ಗೆದ್ದು ಇತರ ಎರಡು ರಾಜ್ಯಗಳಲ್ಲಿ ಮೈತ್ರಿ ಪಾಲುದಾರರಾಗಿ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಆಪ್‌ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿದ ಚುನಾವಣಾ ಆಯೋಗ
Advertisement
ರಾಹುಲ್ ಗಾಂಧಿ ಯುಕೆ (UK) ಭೇಟಿಯ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗಳ ಕುರಿತು ಪ್ರಸ್ತಾಪಿಸಿದ ಅವರು, ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರು ಸುಳ್ಳು ಹೇಳುತ್ತಾ ದೇಶ ಮತ್ತು ಸರ್ಕಾರದ ಮಾನಹಾನಿ ಮಾಡುವುದನ್ನು ಮುಂದುವರೆಸಿದರೆ ಇಡೀ ದೇಶದಿಂದ ಕಾಂಗ್ರೆಸ್ ಪಕ್ಷವನ್ನು ವೈಟ್‌ವಾಶ್ ಮಾಡಲಾಗುತ್ತದೆ ಎಂದರು. ಇದನ್ನೂ ಓದಿ: ಗೆಹ್ಲೋಟ್ ಸರ್ಕಾರದ ವಿರುದ್ಧ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ – ಕಾಂಗ್ರೆಸ್ ಖಂಡನೆ
Advertisement
ಪ್ರಧಾನಿ ನರೇಂದ್ರ ಮೋದಿಯವರನ್ನು ಎಷ್ಟು ಕೆಟ್ಟದಾಗಿ ಟೀಕಿಸುತ್ತಾರೋ ಅಷ್ಟು ಬಿಜೆಪಿ ಬೆಳೆಯುತ್ತದೆ. ವಿವಾದಾತ್ಮಕ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (AFSPA) ಅಸ್ಸಾಂನ ಶೇ.70ರಷ್ಟು ಪ್ರದೇಶದಿಂದ ತೆಗೆದುಹಾಕಲಾಗಿದೆ. ಇದರಿಂದಾಗಿ ಬೋಡೋಲ್ಯಾಂಡ್ ಮತ್ತು ಕರ್ಬಿ ಆಂಗ್ಲಾಂಗ್ ಪ್ರದೇಶಗಳು ಶಾಂತಿಯುತವಾಗಿವೆ ಮತ್ತು ಅದರ ನೆರೆಯ ಪ್ರಾಂತ್ಯಗಳೊಂದಿಗೆ ರಾಜ್ಯದ ಗಡಿ ವಿವಾದಗಳನ್ನು ಪರಿಹರಿಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: DMK ಸರ್ಕಾರಕ್ಕೆ ಹಿನ್ನಡೆ – ತಮಿಳುನಾಡಿನಲ್ಲಿ RSSಗೆ ರ‍್ಯಾಲಿ ಅನುಮತಿ
ಮೊದಲು ಅಸ್ಸಾಂ ರಾಜ್ಯವು ಆಂದೋಲನ (Andolan) ಮತ್ತು ಭಯೋತ್ಪಾದನೆಗೆ (Terrorism) ಹೆಸರುವಾಸಿಯಾಗಿತ್ತು. ಆದರೆ ಈಗ ಅಲ್ಲಿ ಶಾಂತಿ ನೆಲೆಸಿದೆ ಮತ್ತು ಜನರು ಬಿಹು ಸಂಗೀತದ ಬಡಿತಗಳಿಗೆ ನೃತ್ಯ ಮಾಡುತ್ತಿದ್ದಾರೆ. ಏಪ್ರಿಲ್ 14ರಂದು ಗುವಾಹಟಿಯಲ್ಲಿ (Guwahati) ನಡೆಯಲಿರುವ ಮೆಗಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ 11,000ಕ್ಕೂ ಹೆಚ್ಚು ನೃತ್ಯಗಾರರು ಪ್ರದರ್ಶನ ನೀಡಲಿದ್ದಾರೆ ಎಂದರು. ಇದನ್ನೂ ಓದಿ: ಶೀಘ್ರದಲ್ಲೇ ಎರಡು ಹಂತದಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ: ಸಿಎಂ