-ಮಂಡ್ಯ’ಲೋಕ’ ಅಖಾಡದ ಬಿಜೆಪಿ ಇನ್‍ಸೈಡ್ ಸ್ಟೋರಿ
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹೊಸ ಅಭ್ಯರ್ಥಿಗಳು ಕಣದಲ್ಲಿದ್ದರೂ ಯಾವ ಪ್ರಭಾವಿ ಮುಖಂಡರ ಸ್ಪರ್ಧೆಗಿಂತ ಭಿನ್ನವಾಗಿಲ್ಲ. ಕಾರಣ ಓರ್ವ ಅಭ್ಯರ್ಥಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ, ಇತ್ತ ಮಾಜಿ ಸಚಿವ, ನಟ ಅಂಬರೀಶ್ ಅವರ ಪತ್ನಿ ಸುಮಲತಾ ಮಂಡ್ಯ ಅಖಾಡದಲ್ಲಿ ಮಿಂಚಿನಂತೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಸುಮಲತಾ ಅಂಬರೀಶ್‍ಗೆ ಬಿಜೆಪಿ ಬೆಂಬಲ ನೀಡುತ್ತಾ ಅಥವಾ ಸುಮಲತಾ ಕಮಲವನ್ನು ಹಿಡಿಯುತ್ತಾರಾ ಎಂಬ ಪ್ರಶ್ನೆಗಳು ಮಂಡ್ಯ ರಾಜಕೀಯ ಅಂಗಳದಲ್ಲಿ ಹುಟ್ಟಿಕೊಂಡಿವೆ.
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧಿಸಿದ್ರೆ, ನನ್ನ ಅಭ್ಯಂತರವಿಲ್ಲ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಆದ್ರೆ ಪಕ್ಷದ ಕೋರ್ ಕಮಿಟಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಎಸ್‍ಎಂಕೆ ಹೇಳಿದ್ದಾರೆ ಎನ್ನಲಾಗಿದೆ. ಇಂದು ನಡೆಯುವ ಸಭೆಯಲ್ಲಿ ಮಂಡ್ಯ ಹೊರತುಪಡಿಸಿ 27 ಕ್ಷೇತ್ರಗಳ ಅಭ್ಯರ್ಥಿಗಳನ್ನ ಅಂತಿಮಗೊಳಿಸಿ ಶಿಫಾರಸ್ಸು ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಸುಮಲತಾರ ಅಂತಿಮ ನಿರ್ಧಾರದ ಬಳಿಕ ಬಿಜೆಪಿ ಮಂಡ್ಯದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೋ? ಬೇಡವೋ ಎಂಬುದನ್ನು ಚಿಂತಿಸಲಿದೆ. ಹಾಗಾಗಿ ಸೋಮವಾರದವರೆಗೆ ಅಧಿಕೃತ ನಿರ್ಧಾರ ಪ್ರಕಟಿಸದೆ ಕಾದು ನೋಡುವ ತಂತ್ರಕ್ಕೆ ಬಿಜೆಪಿ ಮುಂದಾಗಿದೆ.