ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಲೆ ಶುರುವಾಗಿದ್ದು, ಇಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ನರೇಂದ್ರಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿಂದು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಟಿಆರ್‌ಎಸ್ (ತೆಲಂಗಾಣ ರಾಷ್ಟ್ರಸಮಿತಿ) ಒಂದು ಕುಟುಂಬದ ಪಕ್ಷವಾಗಿದ್ದು, ಅಧಿಕಾರದಲ್ಲಿರಲು ಯೋಗ್ಯವಲ್ಲ. ತೆಲಂಗಾಣದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿ 8 ವರ್ಷ – ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಗೆ ಚಾಲನೆ
Advertisement
Advertisement
ಕುಟುಂಬ ಆಡಳಿತದಿಂದಾಗಿ ದೇಶದ ಯುವಕರಿಗೆ ರಾಜಕೀಯದಲ್ಲಿ ಅವಕಾಶ ಸಿಗುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಎದ್ದಿದ್ದು, ಮುಂದಿನ ವಿಧಾನಸಭೆ ಚುನಾವಣೆಯ ನಂತರ ಸರ್ಕಾರ ಬದಲಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಪಾಟಿದರ್ ಸ್ಫೋಟಕ ಶತಕ, ಡಿ.ಕೆ ಅಬ್ಬರ – ಅಹಮದಾಬಾದ್‌ಗೆ ಹಾರಿದ ಬೆಂಗ್ಳೂರು
Advertisement
ಹಾಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (KCR) ಮತ್ತು ಅವರ ಕುಟುಂಬದ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದರು. ಅಲ್ಲದೆ, ತೆಲಂಗಾಣದಲ್ಲಿ ಕುಟುಂಬ ಆಡಳಿತವನ್ನು ಕೊನೆಗಾಣಿಸುವಂತೆ ಜನರಿಗೆ ಕರೆ ನೀಡಿದರು.
Advertisement
ಪ್ರತ್ಯೇಕ ತೆಲಂಗಾಣಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಆಶೋತ್ತರಗಳನ್ನು ಈಡೇರಿಸುವಲ್ಲಿ ಕುಟುಂಬ ಆಡಳಿತ ವಿಫಲವಾಗಿದೆ. ಆದ್ದರಿಂದ ತೆಲಂಗಾಣಕ್ಕೆ ಪ್ರಗತಿಪರ ಸರ್ಕಾರ ಬೇಕಿದ್ದು, ಬಿಜೆಪಿಯಿಂದ ಮಾತ್ರ ಅದು ಸಾಧ್ಯ ಎಂದು ಮೋದಿ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೆಸಿಆರ್ ಪಕ್ಷದ ವಕ್ತಾರ ಕ್ರಿಶಾಂಕ್ ಮನ್ನೆ, ಪ್ರಧಾನಿ ನರೇಂದ್ರಮೋದಿ ದೇಶದ ಪ್ರಧಾನಿಯಂತೆ ಮಾತನಾಡಿಲ್ಲ. ಅವರು ಬಿಜೆಪಿ ನಾಯಕನಾಗಿ ಒಂದು ಪರಿವಾರದ ಬಗ್ಗೆ ಮಾತನಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.