ಲಕ್ನೋ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರಿ ಯಂತ್ರಗಳನ್ನು ದುರುಪಯೋಗಪಡಿಸಿಕೊಳ್ಳದೇ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಲುತ್ತದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
Advertisement
ಚುನಾವಣಾ ಆಯೋಗದ ಭೀತಿಯಿಂದ ಸರ್ಕಾರಕ್ಕೆ ಯಂತ್ರಗಳು ಅಗತ್ಯ. ಚುನಾವಣಾ ಆಯೋಗವು ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯನ್ನು ಖಾತ್ರಿ ಪಡಿಸಬೇಕು. ಸರ್ಕಾರಿ ಯಂತ್ರಗಳನ್ನು ದುರುಪಯೋಗಪಡಿಸಿಕೊಳ್ಳದಿದ್ದರೆ ಮತ್ತು ಮತಯಂತ್ರಗಳನ್ನು ದುರ್ಬಳಕೆ ಮಾಡದಿದ್ದರೆ ಬಿಜೆಪಿ ಈ ಚುನಾವಣೆಯಲ್ಲಿ ಸೋಲುತ್ತದೆ ಎಂದು ಹೇಳಿದ್ದಾರೆ.
Advertisement
Advertisement
ಮುಂದಿನ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಲು ಇಂದು ಲಕ್ನೋದಲ್ಲಿ ಪಕ್ಷದ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಗೋವಾದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ : ಸಂಜಯ್ ರಾವುತ್
Advertisement
BJP will lose Assembly elections if it does not misuse govt machinery, manipulate voting: Mayawati
Read @ANI Story | https://t.co/XMMpjunMvn#BJP #UttarPradeshElections2022 pic.twitter.com/0doNdaHD5b
— ANI Digital (@ani_digital) January 9, 2022
ಐದು ರಾಜ್ಯಗಳ ವಿಧಾನಸಭೆ ಚುನಾವಣೆಯು ಶಾಂತಿಯುತವಾಗಿ ನಡೆಯಬೇಕು. ಪೊಲೀಸರು ಪಕ್ಷಪಾತವಿಲ್ಲದೇ ಕಾರ್ಯನಿರ್ವಹಿಸಬೇಕು. ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ಜನರು ಮತ ಹಾಕಬೇಕು. ನಮ್ಮ ಪಕ್ಷವು ಚುನಾವಣಾ ಆಯೋಗದ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುತ್ತದೆ ಎಂದಿದ್ದಾರೆ.
ಫೆಬ್ರವರಿ 10 ರಿಂದ ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಐದು ರಾಜ್ಯಗಳ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಇದನ್ನೂ ಓದಿ: ಜಾಕ್ವೆಲಿನ್ ಕುತ್ತಿಗೆ ಮೇಲೆ ಲವ್ ಬೈಟ್ – ಫೋಟೋ ವೈರಲ್