– ಇದೇ ವರ್ತನೆ ಮುಂದುವರಿಸಿದ್ರೆ ಹುಷಾರ್ ಎಂದ ಡಿಸಿಎಂ
ಬೆಳಗಾವಿ: ರಾಜ್ಯದಲ್ಲಿ ಬಿಜೆಪಿಯವರಿಗೆ (BJP) ಒಂದೇ ಒಂದು ಸಭೆ ಮಾಡಲು ಬಿಡಲ್ಲ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ (Siddaramaiah) ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರ ಅಡ್ಡಿ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಒಂದು ಹೇಳಲು ಬಯಸುತ್ತೇನೆ. ನೀವು ಒಂದು ಸಭೆ ಮಾಡಲು ಬಿಡಲ್ಲ. ನಾನು ಕಾರ್ಯಕರ್ತರಿಗೆ ಒಂದು ಸಂದೇಶ ಕೊಡುತ್ತೇವೆ. ಇದೇ ವರ್ತನೆ ಮುಂದುವರಿಸಿದರೆ ಹುಷಾರ್ ಎಂದು ವಾರ್ನಿಂಗ್ ಕೊಟ್ಟರು. ಇದನ್ನೂ ಓದಿ: ಇ-ಸ್ವತ್ತು ಉತಾರ ಮಾಡಲು 4 ಲಕ್ಷ ಲಂಚ ಪಡೆಯುತ್ತಿದ್ದಾಗ ಪಿಡಿಓ, ಮೂವರು ಗ್ರಾಪಂ ಸದಸ್ಯ ಅರೆಸ್ಟ್
ನಿಮಗಿಂತ ಕಾರ್ಯರೂಪ ಮಾಡುವ ಶಕ್ತಿ ಜನ ನನಗೆ ಕೊಟ್ಟಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಬುದ್ದಿವಾದ ಹೇಳಿದ್ರೆ ಸರಿ, ಇದು ವಾರ್ನಿಂಗ್ ಎಂದು ಖಡಕ್ ಸಂದೇಶ ಕೊಟ್ಟರು. ಇದನ್ನೂ ಓದಿ: ಮೋದಿ-ರಾಜನಾಥ್ ಸಿಂಗ್ ಮಹತ್ವದ ಚರ್ಚೆ; ಉಗ್ರರ ವಿರುದ್ಧ ಮುಂದಿನ ಕ್ರಮಕ್ಕೆ ಮಾಸ್ಟರ್ ಪ್ಲ್ಯಾನ್