Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಸಲ್ಮಾನರಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿರುದ್ಧ ಉಗ್ರ ಹೋರಾಟ; ಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ: ವಿಜಯೇಂದ್ರ

Public TV
Last updated: March 17, 2025 4:21 pm
Public TV
Share
2 Min Read
BY Vijayendra
SHARE

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು, ಎಲ್ಲ ವರ್ಗದಲ್ಲೂ ಬಡವರಿದ್ದಾರೆ. ಹಿಂದೂಗಳಲ್ಲೂ ಕೂಡ ಬಡವರಿದ್ದಾರೆ. ಮುಸಲ್ಮಾನರಿಗೆ ಸರ್ಕಾರಿ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ಕೊಡುವುದಾದರೆ ಹಿಂದೂಗಳೇನು ಅಪರಾಧ ಮಾಡಿದ್ದಾರೆ? ಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಶೇ.4 ಮೀಸಲಾತಿ ಕುರಿತ ಮಸೂದೆಯನ್ನು ಸದನದಲ್ಲಿ ತಂದಾಗ ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ, ಪ್ರತಿಭಟನೆ ಮಾಡುತ್ತೇವೆ. ಇದನ್ನು ಅನುಷ್ಠಾನಗೊಳಿಸಲು ನಾವು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.

ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಡಿ.ಕೆ.ಶಿವಕುಮಾರ್ ಅವರು ಹಿರಿಯರಿದ್ದಾರೆ. ಕುವೆಂಪು ಅವರ ನಾಡಗೀತೆಯನ್ನು ನೆನಪಿಸಿಕೊಂಡಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟದ ನೆನಪನ್ನು ಅವರು ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ವಿಷಬೀಜವನ್ನು ಬಿತ್ತುವ ಕೆಲಸವನ್ನು ಮಾಡುತ್ತಿದೆ ಎಂಬುದನ್ನು ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಬಯಸುವುದಾಗಿ ವಿಜಯೇಂದ್ರ ಹೇಳಿದರು.

ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಮಾಡಲು ಹೊರಟಿದ್ದು, ಇದನ್ನು ಬಿಜೆಪಿ ಪ್ರತಿಭಟಿಸುತ್ತದೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಪ್ರವರ್ಗ 2 ಬಿ ಅಡಿಯಲ್ಲಿ ಜೈನರು ಬರುತ್ತಾರಾ? ಮುಸಲ್ಮಾನರು ಬಿಟ್ಟರೆ ಯಾರು ಬರುತ್ತಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಕಿವಿಗೆ ಹೂವಿಡುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು.

ಸರ್ಕಾರಿ ಗುತ್ತಿಗೆಗಳಲ್ಲಿ ಕಾಮಗಾರಿಯ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವುದಾಗಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಅನುಮೋದಿಸಿದ್ದಾರೆ. ಸದನದಲ್ಲಿ ಮಸೂದೆ ತರಲು ಮುಂದಾಗಿದ್ದಾರೆ. ಇದನ್ನು ಬಿಜೆಪಿ ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ತಿಳಿಸಿದರು.

ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಆದರೆ, ಅಲ್ಪಸಂಖ್ಯಾತರ ಅಥವಾ ಮುಸಲ್ಮಾನರ ತುಷ್ಟೀಕರಣದ ರಾಜಕೀಯ ನೀತಿಯನ್ನು ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದ್ದು, ಇದನ್ನು ನಾವು ಗಟ್ಟಿಯಾಗಿ ವಿರೋಧಿಸುತ್ತೇವೆ. ಮುಸಲ್ಮಾನರಿಗೆ ಎಂಎಲ್‍ಸಿ ಮಾಡಿ, ರಾಜ್ಯಸಭಾ ಸದಸ್ಯತ್ವ ಕೊಡಿ ಎಂದು ನಿನ್ನೆ ಡಿ.ಕೆ.ಶಿವಕುಮಾರ್ ಅವರು ಸವಾಲು ಹಾಕಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಡಾ.ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಗಳನ್ನಾಗಿ ನಾವು ಮಾಡಿದ್ದೆವು. ಕಾಂಗ್ರೆಸ್ಸಿನವರು ಇದನ್ನು ಮಾಡಿದ್ದಲ್ಲ ಎಂದು ನೆನಪಿಸಿದರು.

ನರೇಂದ್ರ ಮೋದಿಜೀ ಅವರ ಸರ್ಕಾರ ಬಂದ ಬಳಿಕ ನಜ್ಮಾ ಹೆಫ್ತುಲ್ಲರನ್ನು ರಾಜ್ಯಪಾಲರನ್ನಾಗಿ ನಾವು ಆಯ್ಕೆ ಮಾಡಿದ್ದೆವು. ಜಸ್ಟಿಸ್ ಅಬ್ದುಲ್ ನಜೀರ್ ಅವರಂಥ ಮಹಾನ್ ವ್ಯಕ್ತಿಗಳನ್ನು ರಾಜ್ಯಪಾಲರನ್ನಾಗಿ ಆಯ್ಕೆ ಮಾಡಿದ್ದೇವೆ. ಮಹಮ್ಮದ್ ಆರಿಫ್ ಖಾನ್ ಅವರನ್ನು ರಾಜ್ಯಪಾಲರನ್ನಾಗಿ ಆಯ್ಕೆ ಮಾಡಿದ್ದರು. ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರಿಗೆ ಉತ್ಕೃಷ್ಟ ಗೌರವ ‘ಭಾರತ ರತ್ನ’ ಕೊಟ್ಟದ್ದು, ಕಾಂಗ್ರೆಸ್ಸಿನವರಲ್ಲ. ನರೇಂದ್ರ ಮೋದಿಯವರ ಸರ್ಕಾರ ಕೊಟ್ಟದ್ದು ಎಂದು ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸುವುದಾಗಿ ಹೇಳಿದರು.

ಕಾಂಗ್ರೆಸ್ಸಿನ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಇಂದು ನಿನ್ನೆಯದಲ್ಲ. ನಿಮ್ಮ ಪಕ್ಷದ ದಲಿತ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಮುಸ್ಲಿಂ ಗೂಂಡಾಗಳು ನುಗ್ಗಿ ಮನೆಗೆ ಬೆಂಕಿ ಹಚ್ಚಿದರಲ್ಲವೇ? ಆಗ ನಿಮ್ಮ ದಲಿತ ಕಾಳಜಿ ಎಲ್ಲಿ ಹೋಗಿತ್ತು ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರರನ್ನು ಪ್ರಶ್ನಿಸುವುದಾಗಿ ತಿಳಿಸಿದರು. ಮುಸಲ್ಮಾನರಿಗೆ ಖುಷಿ ಪಡಿಸಲು ನೀವು ಯಾವ ಮಟ್ಟಕ್ಕಾದರೂ ಇಳಿಯುತ್ತೀರಿ ಎಂದು ಟೀಕಿಸಿದರು.

TAGGED:B.Y vijayendrabengalurubjpcongressHindusmuslimsಬಿ.ವೈ.ವಿಜಯೇಂದ್ರ
Share This Article
Facebook Whatsapp Whatsapp Telegram

Cinema Updates

Vishal
47ನೇ ವಯಸ್ಸಲ್ಲಿ ಖ್ಯಾತ ನಟಿಯನ್ನು ಮದುವೆಯಾಗಲಿದ್ದಾರೆ ನಟ ವಿಶಾಲ್‌ – ಯಾರು ಗೊತ್ತಾ ಆ ಬೆಡಗಿ?
12 hours ago
Sanjjanaa Galrani 1
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ
13 hours ago
twinkle khanna
ಅಕ್ಷಯ್, ವಿಕ್ಕಿ ಕೌಶಲ್ ‘ಆಪರೇಷನ್ ಸಿಂಧೂರ’ ಸಿನಿಮಾಗಾಗಿ ಫೈಟ್ ಮಾಡ್ತಿಲ್ಲ: ಟ್ವಿಂಕಲ್ ಖನ್ನಾ
13 hours ago
Upendra 2
ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್
14 hours ago

You Might Also Like

AI ಚಿತ್ರ
Court

ನೀರಿನ ಬಾಟಲಿಗೆ 1 ರೂ. ಜಿಎಸ್‌ಟಿ – ರೆಸ್ಟೋರೆಂಟ್‌ಗೆ 8 ಸಾವಿರ ದಂಡ

Public TV
By Public TV
8 minutes ago
Bengaluru Byadarahalli Theft
Bengaluru City

ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್ – ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ ಕಳ್ಳ ಅರೆಸ್ಟ್

Public TV
By Public TV
13 minutes ago
POTHOLES BALAJI 2
Bengaluru City

ನಿಮ್ಮ ಕೆಟ್ಟ ರಸ್ತೆಗಳಿಂದ ಕುತ್ತಿಗೆ, ಬೆನ್ನು ನೋವು – 50 ಲಕ್ಷ ಪರಿಹಾರ ಕೋರಿ ಬಿಬಿಎಂಪಿಗೆ ಲೀಗಲ್‌ ನೋಟಿಸ್‌

Public TV
By Public TV
60 minutes ago
Congress Sadhana Samavesha
Bellary

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ – ವಿಜಯನಗರದಲ್ಲಿ ಇಂದು ಸಾಧನಾ ಸಮಾವೇಶ

Public TV
By Public TV
1 hour ago
WEATHER 2
Bengaluru City

ಮುಂದಿನ 3 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಭಾರೀ ಮಳೆ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 20-05-2025

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?