ಮುಂಬೈ: ಪ್ರತಿಪಕ್ಷಗಳ ಮಹಾಘಟಬಂಧನ್ ಕೇವಲ ಭ್ರಮೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಬಳಿಕ ಮತ್ತೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ರಿಪಬ್ಲಿಕ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ಮಹಾಘಟಬಂಧನ್ ಕೇವಲ ಒಂದು ಭ್ರಮೆಯಾಗಿದೆ. ಅವುಗಳು ಎಂದಿಗೂ ಅಸ್ತಿತ್ವಕ್ಕೆ ಬರುವುದಿಲ್ಲ. 2014 ರಲ್ಲಿ ಎಲ್ಲಾ ಪಕ್ಷಗಳನ್ನು ಹೊಡೆದು ಹಾಕಿ ಬಿಜೆಪಿ ಅಧಿಕಾರವನ್ನು ಹಿಡಿದಿತ್ತು. ಅಲ್ಲದೇ ಪ್ರಾದೇಶಿಕ ಪಕ್ಷಗಳ ನಾಯಕರು ಒಬ್ಬರಿಗೊಬ್ಬರು ಸಹಾಯ ಮಾಡುವ ಮನಸ್ಥಿತಿಯನ್ನು ಹೊಂದಿಲ್ಲ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆಯನ್ನು ಏರುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
Advertisement
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಶಿವಸೇನೆಯೂ ಇರಲಿದೆ. ಈಗಾಗಲೇ ಈ ಸಂಬಂಧ ಮಾತುಕತೆಗಳು ಸಹ ನಡೆದಿವೆ. ಕಳೆದ ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಲೋಕಸಭಾ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಮುಖ್ಯವಾಗಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‍ಗಡ ರಾಜ್ಯಗಳ ಜನತೆಯ ನಿರ್ಧಾರವನ್ನು ನಾವು ಒಪ್ಪಿದ್ದೇವೆಂದು ತಿಳಿಸಿದರು.
Advertisement
ದೇಶದಲ್ಲಿ 2014ರ ವೇಳೆಗೆ ನಾವು ಕೇವಲ 6 ರಾಜ್ಯಗಳಲ್ಲಿ ಮಾತ್ರ ಅಧಿಕಾರ ಹೊಂದಿದ್ದೆವು. ಆದರೆ ಈಗ 16 ರಾಜ್ಯಗಳಲ್ಲಿ ಅಧಿಕಾರವನ್ನು ಸ್ಥಾಪಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಶಕ್ತಿಯ ಆಧಾರದ ಮೇಲೆ ಚುನಾವಣೆ ಎದುರಿಸುತ್ತದೆಯೇ ಹೊರತು, ಇನ್ನೊಬ್ಬರ ದೌರ್ಬಲ್ಯಗಳನ್ನು ಹಿಡಿದು ಮುನ್ನಡೆಯುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv