ಮೈಸೂರು: ಒಂದು ಪಕ್ಷದ ವಿರುದ್ಧ ಉಳಿದೆಲ್ಲ ಪಕ್ಷಗಳು ಒಗ್ಗೂಡುತ್ತಿವೆ. ಇದು ಅವರಲ್ಲಿರುವ ಬಿಜೆಪಿ ಕುರಿತಾದ ಭಯವನ್ನು ತಿಳಿಸುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಂಜನಗೂಡು, ಗುಂಡ್ಲುಪೇಟೆ ವಿಧಾಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಆದರೆ ನಂತರದ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲನುಭವಿಸಿತು ಎಂದು ಹೇಳುವ ಮೂಲಕ ಉಪಚುನಾವಣೆ ಫಲಿತಾಂಶವನ್ನು ಸಮರ್ಥಿಸಿಕೊಂಡರು. ಸಂಸದರು, ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಇದರಿಂದಾಗಿ ನಾನು ಚುನಾವಣೆಯಲ್ಲಿ ಭಾಗವಹಿಸಿ ಮತದಾನ ಮಾಡುವ ಅವಶ್ಯಕತೆ ಇರಲಿಲ್ಲ. ಆದ್ದರಿಂದ ಗೈರಾಗಿದ್ದೆ. ಈಗ ಆಯ್ಕೆಯಾಗಿರುವ ಮೇಯರ್ ಆಗಿ ಕಾಂಗ್ರೆಸ್‍ನ ಪುಷ್ಪಲತಾ ಜಗನ್ನಾಥ್, ಉಪ ಮೇಯರ್ ಆಗಿ ಜೆಡಿಎಸ್‍ನ ಶಫಿ ಅಹಮದ್ ಅವರಿಗೆ ಶುಭಕೋರಲು ಬಂದಿರುವೆ ಎಂದು ತಿಳಿಸಿದರು.
Advertisement
ಪ್ರತಾಪ್ ಸಿಂಹ ಅವರು ಪ್ರಮಾಣವಚನ ಕಾರ್ಯಕ್ರಮದ ಸಭಾಂಗಣಕ್ಕೆ ಆಗಮಿಸುತ್ತಿದ್ದಂತೆ ಉನ್ನತ ಶಿಕ್ಷಣ ಸಚಿವ ಜಿ.ಡಿ.ದೇವೇಗೌಡ ಅವರ ಕೈ ಕುಲುಕಿ, ಮಂದಹಾಸದಿಂದಲೇ ಮಾತನಾಡಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews