ತುಮಕೂರು: ಕೊರಟಗೆರೆ ಕ್ಷೇತ್ರದಲ್ಲಿ ನಡೆದ ಬಿಜೆಪಿ (BJP) ಜನಸಂಕಲ್ಪ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತ ಬೆನ್ನಲ್ಲೇ ಟಿಕೆಟ್ (Election Ticket) ಫೈಟ್ ಜೋರಾಗಿದೆ. ಆಕಾಂಕ್ಷಿಗಳಾದ ಕೆ.ಎಂ.ಮುನಿಯಪ್ಪ (KM Muniyappa) ಹಾಗೂ ಅನಿಲ್ ಕುಮಾರ್ ನಡುವೆ ಟಿಕೆಟ್ ಗಾಗಿ ಫೈಟ್ ನಡೆಯುತ್ತಿದೆ.
Advertisement
ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎಂ.ಮುನಿಯಪ್ಪ, ಕೊರಟಗೆರೆ ಕ್ಷೇತ್ರದಲ್ಲಿ ನನಗೆ ಟಿಕೆಟ್ ಕೊಟ್ಟರೆ ಮಾತ್ರ ಬಿಜೆಪಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದ ಗೆಲುವಿಗೆ ಭಾರತ್ ಜೋಡೋ ಯಾತ್ರೆ ಸಹಾಯ ಮಾಡಿದೆ: ಖರ್ಗೆ
Advertisement
Advertisement
ಜನಸಂಕಲ್ಪ ಯಾತ್ರೆಗೆ ಜನಸ್ತೋಮವೇ ಹರಿದು ಬಂದಿದ್ದು ನನ್ನ ಪರಿಶ್ರಮದ ಪ್ರತಿಫಲ. ಕಳೆದ ನಾಲ್ಕು ವರ್ಷಗಳಿಂದ ನಾನು ರಾಷ್ಟ್ರೀಯ ನಾಯಕರು ಮತ್ತು ರಾಜ್ಯ ನಾಯಕರೊಂದಿಗೆ ವಿಧಾನಸಭಾ ಕ್ಷೇತ್ರದಲ್ಲಿ ಬಂದು ಕೆಲಸ ಮಾಡುತ್ತಿದ್ದೇನೆ. ಈ ನನ್ನ ಪರಿಶ್ರಮದಿಂದಾಗಿ ಸಾಗರೋಪಾದಿಯಲ್ಲಿ ಜನರು ಯಲಹಂಕ ಯಾತ್ರೆಗೆ ಹರಿದು ಬಂದು ಯಶಸ್ವಿಗೊಳಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಟಿಆರ್‌ಎಸ್ ಅಲ್ಲ, ಇನ್ಮುಂದೆ ಬಿಆರ್‌ಎಸ್ – ಕೆಸಿಆರ್ ಪಕ್ಷದ ಹೆಸರು ಬದಲಾವಣೆಗೆ ಚುನಾವಣಾ ಆಯೋಗ ಒಪ್ಪಿಗೆ
Advertisement
ಯಾರಿಗೆ ಟಿಕೆಟ್ ಕೊಟ್ಟರೂ ಕೊರಟಗೆರೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ಮಾತು ಸುಳ್ಳು. ನನಗೆ ಟಿಕೆಟ್ ಕೊಟ್ಟರೆ ಮಾತ್ರ ಬಿಜೆಪಿ ಗೆಲ್ಲುತ್ತೆ, ಇಲ್ಲದಿದ್ರೆ ಸೋಲುತ್ತದೆ. ಹೈಕಮಾಂಡ್ ನನಗೆ ಟಿಕೆಟ್ ಕೊಡುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.