ಚಾಮರಾಜನಗರ: ಇಲ್ಲಿನ ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ (BJP) ಪ್ಲ್ಯಾನ್ ಸಕ್ಸಸ್ ಆದ ಪರಿಣಾಮ ಗೆಲುವಿನ ಹೊಸ್ತಿಲಲ್ಲಿದ್ದ ಕಾಂಗ್ರೆಸ್ (Congress) ಮುಗ್ಗರಿಸಿ ಬಿದ್ದು ಬಿಜೆಪಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದೆ.
31 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್‌ನ ಮೂವರು ಸದಸ್ಯರು ಗೈರಾದ ಪರಿಣಾಮ ಅನಾಯಾಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ ಏರಿತು. ಬಿಜೆಪಿಯ ಸುರೇಶ್ ನಾಯಕ್ ಅಧ್ಯಕ್ಷರಾಗಿ ಆಯ್ಕೆಯಾದರೇ ಉಪಾಧ್ಯಕ್ಷರಾಗಿ ಮಮತಾ ಬಾಲಸುಬ್ರಹ್ಮಣ್ಯ ಆಯ್ಕೆಯಾದರು. ಇದನ್ನೂ ಓದಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ದೃಢ; ಎಲ್ಲ ರಾಜ್ಯಗಳ ಆಸ್ಪತ್ರೆಗಳಲ್ಲಿ ಐಸೋಲೇಷನ್ ಸೌಲಭ್ಯ ಸಿದ್ಧತೆಗೆ ಕೇಂದ್ರ ಸೂಚನೆ
ಬಿಜೆಪಿ ಆಪರೇಷನ್ ರಿವರ್ಸ್ ಪ್ಲ್ಯಾನ್ ಮಾಡಲು ಶಾಸಕ ಸಿ.ಪುಟ್ಟರಂಗಶೆಟ್ಟಿ ವಿಫಲರಾದ ಹಿನ್ನಲೆ ಕಾಂಗ್ರೆಸ್ ಪಕ್ಷ ಕೊನೇ ಘಳಿಗೆಯಲ್ಲಿ ಅಧಿಕಾರ ಕಳೆದುಕೊಂಡಿತು. ನಗರಸಭೆಯ 31 ಸದಸ್ಯರು ಹಾಗೂ ಸಂಸದ, ಶಾಸಕರ ಬಲದೊಂದಿಗೆ 33 ಸದಸ್ಯರ ಬಲವನ್ನು ಹೊಂದಿತ್ತು. ಓರ್ವ ಬಿಎಸ್ಪಿ ಸದಸ್ಯ ಹೆಚ್ಚು ಸಭೆಗೆ ಗೈರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸದಸ್ಯತ್ವ ರದ್ದುಗೊಳಿಸಿದ್ದರು.
32 ಮಂದಿ ಸದಸ್ಯರ ಬಲ ಹೊಂದಿರುವ ನಗರಸಭೆಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ಸುರೇಶ್, ಮಮತಾ ಹಾಗೂ ಕಾಂಗ್ರೆಸ್ ಪಕ್ಷದಿಂದ ಆರ್.ಎಂ ರಾಜಪ್ಪ, ಅಬ್ರಾರ್ ಅಹಮದ್ ನಾಮಪತ್ರ ಸಲ್ಲಿಸಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಅಧ್ಯಕ್ಷ–ಉಪಾಧ್ಯಕ್ಷ ಆಯ್ಕೆಯ ಪ್ರಕ್ರಿಯೆಯಲ್ಲಿ ಸದಸ್ಯರು ಕೈ ಎತ್ತುವ ತಮ್ಮ ಮತ ಸೂಚಿಸಿದರು. ನಂತರ ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಮಹೇಶ್ ಅಧಿಕೃತವಾಗಿ ಘೋಷಣೆ ಮಾಡಿದರು. ಇದನ್ನೂ ಓದಿ: Su-30 MKI ಜೆಟ್ ಎಂಜಿನ್ ತಯಾರಿಕೆಗೆ ಹೆಚ್‌ಎಎಲ್‌ನೊಂದಿಗೆ ಡೀಲ್ – 26,000 ಕೋಟಿ ಒಪ್ಪಂದಕ್ಕೆ ಸಹಿ!
ಬಿಜೆಪಿಯ ಸುರೇಶ್ ಹಾಗೂ ಮಮತಾ 15 ಮತಗಳನ್ನು ಪಡೆದು ಅಧ್ಯಕ್ಷ-ಉಪಾಧ್ಯಕ್ಷರಾದರೆ, ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಆರ್.ಎಂ ರಾಜಪ್ಪ,ಎ ಸ್‌ಡಿಪಿಐ ಅಭ್ಯರ್ಥಿ ಅಬ್ರಾರ್ ಅಹಮದ್ ತಲಾ 14 ಮತಗಳನ್ನು ಪಡೆದು ಪರಾಜಿತರಾದರು. ಮೂವರು ಕಾಂಗ್ರೆಸ್ ಸದಸ್ಯರಾದ ಆರ್.ಪಿ ನಂಜುಂಡಸ್ವಾಮಿ, ನೀಲಮ್ಮ, ಭಾಗ್ಯಮ್ಮ ಸಭೆಗೆ ಗೈರಾಗಿದ್ದು, ಮತ್ತೋರ್ವ ಕಾಂಗ್ರೆಸ್ ಸದಸ್ಯೆ ಚಂದ್ರಕಲಾ ಸಭೆಗೆ ಆಗಮಿಸಿ, ಬಿಜೆಪಿ ಪರವಾಗಿ ಕೈ ಎತ್ತಿದರು. ಬಿಜೆಪಿ ಸದಸ್ಯ ಮಹದೇವಯ್ಯ ಕಾಂಗ್ರೆಸ್ ಪರವಾಗಿ ಕೈ ಎತ್ತುವ ಮೂಲಕ ಕ್ರಾಸ್ ಓಟ್ ಮಾಡಿದರು. ಇದನ್ನೂ ಓದಿ: 2 ಸಾವಿರ ಪೊಲೀಸ್, ಹೆಲಿಕಾಪ್ಟರ್, ಥರ್ಮಲ್ ಇಮೇಜಿಂಗ್ ವ್ಯವಸ್ಥೆ ಬಳಸಿ ಸ್ವಯಂಘೋಷಿತ `ದೇವರ ಮಗ’ ಖ್ಯಾತಿಯ ಅಪೊಲೋ ಬಂಧನ