ಚಿತ್ರದುರ್ಗ: ಚುನಾವಣೆ ಘೋಷಣೆ ಬೆನ್ನಲ್ಲೇ ಅಭ್ಯರ್ಥಿ ಗೆಲುವಿಗಾಗಿ ರಣತಂತ್ರ ರೂಪಿಸುತ್ತಿರುವ ಬಿಜೆಪಿ (BJP) ಹಿರಿಯೂರು ಶಾಸಕಿ ಪೂರ್ಣಿಮಾ (Purnima) ಪತಿ ಡಿಟಿ ಶ್ರೀನಿವಾಸ್ (DT Srinivas) ಅಮಾನತು ಆದೇಶವನ್ನು ಹಿಂಪಡೆದಿದೆ.
ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು (Hiriyuru) ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಶ್ರೀನಿವಾಸ್ ಅವರು ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಬಂಡಾಯ (ಪಕ್ಷೇತರ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀನಿವಾಸ್ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಗೆ ಭಾರೀ ಪೈಪೋಟಿ ನೀಡಿದ್ದರು. ಈ ವೇಳೆ ಡಿಟಿ ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.
Advertisement
Advertisement
ಆದರೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪತಿಯೇ ಪತ್ನಿಗೆ ತಲೆನೋವಾಗದಿರಲಿ, ಬಿಜೆಪಿಗೆ ನಿಷ್ಠೆಯಿಂದ ಶ್ರಮಿಸಲಿ ಎಂಬ ಸದುದ್ದೇಶದಿಂದ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅಮಾನತು ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜೆಡಿಎಸ್‍ನಲ್ಲಿ ತಾರಕಕ್ಕೇರಿದ ಟಿಕೆಟ್ ವಾರ್- ಹಾಸನದಲ್ಲಿ ಕುಮಾರಸ್ವಾಮಿ V/S ರೇವಣ್ಣ ಫೈಟ್ ಶುರು ಆಗುತ್ತಾ?
Advertisement
ಈ ಆದೇಶದಿಂದಾಗಿ ಫುಲ್ ಆಕ್ಟೀವ್ ಆಗಿರುವ ಶ್ರೀನಿವಾಸ್ ತಮ್ಮ ಪತ್ನಿ ಬೆನ್ನಿಗೆ ನಿಂತಿದ್ದು, ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಹಗಲು, ಇರುಳೆನ್ನದೇ ಫೀಲ್ಡಿಗಿಳಿದು ಮತಭೇಟೆ ನಡೆಸುತ್ತಿದ್ದಾರೆ. ಇದು ಪೂರ್ಣಿಮಾ ಶ್ರೀನಿವಾಸ್‌ಗೆ ಬಿಜೆಪಿ ಕೊಟ್ಟಿರುವ ವರವೆನಿಸಿದೆ.
Advertisement
ಹಾಗೆಯೇ ಶ್ರೀನಿವಾಸ್ ರೀ ಎಂಟ್ರಿ ಬಿಜೆಪಿಗೆ ಆನೆಬಲ ಬಂದಂತಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಶ್ರೀನಿವಾಸ್ ಅಭಿಮಾನಿಗಳು ಡಿಟಿಎಸ್‌ಗೆ ಸ್ವಾಗತದ ಸುರಿಮಳೆಗೈದಿದ್ದಾರೆ. ಇದನ್ನೂ ಓದಿ: ಚೆಕ್‍ಬೌನ್ಸ್ ಕೇಸ್- ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಬಂಧನದ ಭೀತಿ?