Latest
ಉತ್ತರಾಖಂಡದಲ್ಲಿ ಗದ್ದುಗೆ ಏರಿದ ಬಿಜೆಪಿ!

ನವದೆಹಲಿ: ಭಾರತೀಯ ಜನತಾ ಪಾರ್ಟಿ ಉತ್ತರಾಖಂಡ್ ಗದ್ದುಗೆ ಹಿಡಿಯಲು ಸರ್ವಸನ್ನದ್ಧವಾಗಿದೆ. ಉತ್ತರಾಖಂಡ್ ರಾಜ್ಯದಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಈಗಾಗಲೇ ಬಿಜೆಪಿ 47 ಕ್ಷೇತ್ರಗಳಲ್ಲಿ ತನ್ನ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಉತ್ತರಾಖಂಡ್ ರಾಜ್ಯ ಗದ್ದುಗೆಯನ್ನು ಏರಲು ಕನಿಷ್ಠ 36 ಕ್ಷೇತ್ರಗಳಲ್ಲಿ ಗೆಲವು ಪಡೆದುಕೊಳ್ಳಬೇಕು. ಆದರೆ ಬಿಜೆಪಿ ಪಕ್ಷದ ಅಭ್ಯರ್ಥಿಗಳು 47 ಕ್ಷೇತ್ರಗಳಲ್ಲಿ ಗೆಲವು ಕಂಡುಕೊಂಡಿದ್ದಾರೆ. ಇನ್ನು ಕಾಂಗ್ರೆಸ್ ಪಕ್ಷ 11 ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿಗಳು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಾದ ಹರೀಶ್ ರಾವತ್ ಸೇರಿದಂತೆ ಅನೇಕರು ಹಿನ್ನಡೆಯನ್ನು ಅನುಭವಿಸಿದ್ದಾರೆ. ಹರಿದ್ವಾರ್ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಯತೀಶ್ವರಾನಂದ್ ಅವರ ವಿರುದ್ಧ ಹರೀಶ್ ರಾವತ್ ತೀವ್ರ ಹಿನ್ನೆಡೆಯನ್ನು ಅನುಭವಿಸಿದ್ದಾರೆ.
2012ರಲ್ಲಿ ಕಾಂಗ್ರೆಸ್ 32, ಬಿಜೆಪಿ 31, ಬಿಎಸ್‍ಪಿ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
