ಜೈಪುರ: ಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಪ್ರತಾಪ್‍ಗಢದಲ್ಲಿ ಶನಿವಾರ ನಡೆದಿದೆ. ಇದರಿಂದ ರಾಜ್ಯಾದ್ಯಂತ ಆತಂಕ ಸೃಷ್ಠಿಯಾಗಿದೆ.
ಸಾಮ್ರಾತ್ ಕುಮ್ವತ್ ಮೃತ ದುರ್ದೈವಿ. ರಸ್ತೆ ಬದಿಯಲ್ಲಿ ನಿಂತಿದ್ದ ಸಾಮ್ರಾತ್‍ನ್ನನ್ನ ಬೈಕ್‍ನಲ್ಲಿ ಬಂದ ಮೂರ್ನಾಲ್ಕು ದುಷ್ಕರ್ಮಿಗಳು ಮೊದಲು ಗುಂಡಿನ ದಾಳಿ ನಡೆಸಿ ನಂತರ ಕತ್ತಿಯಿಂದ ಆತನ ಕುತ್ತಿಗೆಯನ್ನ ಸೀಳಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಘಟನೆ ನಂತರ ಸ್ಥಳೀಯರು ಆತನನ್ನು ರಕ್ಷಿಸಲು ಮುಂದಾದರೂ ಕೂಡ ತೀವ್ರ ರಕ್ತ ಸ್ರಾವದಿಂದಾಗಿ ಸಾಮ್ರಾತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯನ್ನ ವಿರೋಧಿಸಿ ಸ್ಥಳೀಯರು ಸಾಮ್ರಾತ್‍ನ ಮೃತದೇಹವನ್ನಿಟ್ಟುಕೊಂಡು ಪ್ರತಿಭಟನೆ ಕೈಗೊಂಡಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಬಿಜೆಪಿ ಕಾರ್ಯಕರ್ತನ ರಾಜ್ಯ ಚುನಾವಣೆಯ ಸಂದರ್ಭದಲ್ಲಿ ಹತ್ಯೆ ಮಾಡಿರುವುದಕ್ಕೆ ಬಿಜೆಪಿ ಪಕ್ಷದವರು ತೀವ್ರ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.
Advertisement
ಈ ಸಂಬಂಧ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿರುವ ಪೊಲೀಸರು ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಸಾಮ್ರಾತ್ ಕುಂಟುಂಬದವರು ಹೇಳುವ ಪ್ರಕಾರ, ಮೃತ ಸಾಮ್ರಾತ್ ಬಿಜೆಪಿ ಹಿಂದುಳಿದ ವರ್ಗದ ಘಟಕದಲ್ಲಿ ಸಕ್ರೀಯ ಕಾರ್ಯಕರ್ತನಾಗಿದ್ದು, ಯಾರೊಂದಿಗೆ ದ್ವೇಷವಿರಲಿಲ್ಲ. ಈತನ ಹತ್ಯೆಯಿಂದ ಕುಂಟುಂಬ ಸೇರಿದಂತೆ ನೆರೆಹೊರೆಯವರಿಗೂ ಆಘಾತವಾಗಿದೆ ಎಂದು ಹೇಳಿದ್ದಾರೆ.
Advertisement
ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಈ ಕೃತ್ಯವನ್ನು ಎಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಗಂಭೀರ ವಿಷಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv