ತುಮಕೂರು: ಸಾಮಾಜಿಕ ಜಾಲತಾಣದಲ್ಲಿ (Social Media) ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ (Shakunthala Nataraj) ಅರೆಸ್ಟ್ ಆಗಿದ್ದಾರೆ.
ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ತುಮಕೂರು ಜಯನಗರ ಪೊಲೀಸರು ಶಕುಂತಲಾರನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆ ಪೊಲೀಸ್ ಕಾನ್ಸ್‌ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಅದರಂತೆ ಕಲಂ 299 ಬಿಎನ್‌ಎಸ್ ಅಡಿ ಎಫ್‌ಐಆರ್ ದಾಖಲಾಗಿತ್ತು. ಬುಧವಾರ ಸಂಜೆ ಪೊಲೀಸರು ಶಕುಂತಲಾರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸೇತುವೆಯಿಂದ ಕಾರು ಉರುಳಿದ ಕೇಸ್ – ಎಫ್‌ಐಆರ್ ದಾಖಲು, ತನಿಖೆ ಎದುರಿಸುತ್ತಿದೆ ಗೂಗಲ್ ಮ್ಯಾಪ್ಸ್
ಶಕುಂತಲಾ ಪೋಸ್ಟ್ ಏನು?
ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲಾ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಕಾಂಗ್ರೆಸ್‌ನವರು ಯೋಗೇಶ್ವರ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು: ಸುರೇಶ್ ಬಾಬು ಸಲಹೆ
ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನು ಖಂಡಿಸಿ ಶಕುಂತಲಾ ಮತ್ತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಯತ್ನಾಳ್, ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದರು. ಇದನ್ನೂ ಓದಿ: ಜಿ.ಟಿ.ದೇವೇಗೌಡರಿಗೆ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ: ಸುರೇಶ್ ಬಾಬು