ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಾದಲ್ಲಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿಗೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಪ್ರವೀಣ್ ಪತ್ನಿ ನೂತನಾಗೆ ಟಿಕೆಟ್ ಕೊಡಿ. ನಾವು ಗೆಲ್ಲಿಸಿಕೊಂಡು ಬರ್ತೀವಿ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಂಎಲ್‌ಎ ಟಿಕೆಟ್ ಕೊಡಿ ಎಂದು ಬಿಜೆಪಿ ಕಾರ್ಯಕರ್ತರು ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ಮನೆ ಕಟ್ಟಲು ಸಮತಟ್ಟು ಮಾಡಿದ ಜಾಗದಲ್ಲೇ ಮಗನನ್ನು ಸುಡಲಾಗಿದೆ: ಬಿಕ್ಕಿ ಬಿಕ್ಕಿ ಅತ್ತ ಪ್ರವೀಣ್ ತಾಯಿ
Advertisement
Advertisement
ಹಾಯ್ ಬಾಯ್ ಅನ್ಕೊಂಡು ಆರಾಮವಾಗಿ ಇರ್ತೀರಾ. ನಾವು ಬೀದಿಯಲ್ಲಿ ಸಾಯಬೇಕಾ ಎಂದು ಬಿಜೆಪಿ ನಾಯಕರ ವಿರುದ್ಧ ಗರಂ ಆಗಿರುವ ಕಾರ್ಯಕರ್ತರು, ಪ್ರವೀಣ್ ಪತ್ನಿಗೆ ಟಿಕೆಟ್ ಕೊಟ್ಟರೆ ಚುನಾವಣೆಯ ಎಲ್ಲಾ ಖರ್ಚು ನಾವೇ ನೋಡಿಕೊಳ್ಳುತ್ತೇವೆ. ಆ ಮೂಲಕ ನಾವು ಜಿಹಾದಿಗಳಿಗೆ ಪಾಠ ಕಲಿಸಬೇಕು. ಪ್ರವೀಣ್ ಕೊಲೆಗಡುಕರಿಗೆ ಈ ಮೂಲಕ ಸಂದೇಶ ಕೊಡಬೇಕು ಎಂದು ತಿಳಿಸಿದ್ದಾರೆ.
Advertisement
ನಿಮ್ಮ ಕಠಿಣ ಕ್ರಮದ ನಾಟಕ ಸಾಕು. ಈ ಬಾರಿ ಕಾರ್ಯಕರ್ತರಿಗೆ ಟಿಕೆಟ್ ಕೊಡಿ ಎಂದು ಸರ್ಕಾರ ಹಾಗೂ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕೊಲೆ ಖಂಡನೀಯ – 1 ಕೋಟಿ ರೂ. ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹ
Advertisement
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.