ತುಮಕೂರು: ರಾಜ್ಯದಲ್ಲಿ ಸಾವರ್ಕರ್ ಫೋಟೋ ವಿವಾದ ನಡುವೆ ಮದುವೆ ಮನೆಯಲ್ಲಿ ನವಜೋಡಿಗೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಫೋಟೋ ಗಿಫ್ಟ್ ನೀಡಿದ್ದಾರೆ.
ಈ ತುಮಕೂರಿನ ಸಿದ್ದಿ ವಿನಾಯಕ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಯಾನಂದ- ಸೌಮ್ಯ ಮದುವೆ ನಡೆದಿದೆ. ಈ ಮದುವೆಯ ಆರತಕ್ಷತೆಯ ಸಮಯದಲ್ಲಿ ನವಜೋಡಿಗೆ ಬಿಜೆಪಿ ಎಸ್‍ಟಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಫೋಟೋವನ್ನು ಉಡುಗೊರೆಯಾಗಿ ನೀಡಿದ್ದಾರೆ.
- Advertisement 2-
- Advertisement 3-
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ವಿರೋಧಿಸಿ ಧಾರವಾಡದಲ್ಲಿ ಶುಕ್ರವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕೃತಿ ದಹಿಸಿ ಸಾವರ್ಕರ್ ಭಾವಚಿತ್ರಕ್ಕೆ ಮೊಟ್ಟೆಯಿಂದ ಹೊಡೆದಿದ್ದರು. ಅಷ್ಟೇ ಅಲ್ಲದೇ ಸಾವರ್ಕರ್ ಫೋಟೋಗಳನ್ನೂ ಕಾರ್ಯಕರ್ತರು ಸುಟ್ಟಿದ್ದರು.
- Advertisement 4-
ಇದನ್ನೂ ಓದಿ: ಧರ್ಮದ ಹೆಸರಲ್ಲಿ ಬ್ರಾಹ್ಮಣರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ: ಬಿಜೆಪಿ ನಾಯಕ
ಇತ್ತೀಚೆಗಷ್ಟೇ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದರು. ಇದೇ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬೀಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನವನ್ನು ಮಾಡಿದ್ದರು. ಇದನ್ನೂ ಓದಿ: ಮೊಟ್ಟೆ ಕಾಳಗ: ಆ.26ಕ್ಕೆ ಮಡಿಕೇರಿಯಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಕೋಳಿ ಜಗಳ!