ಮುಂಬೈ: ಕಾಂಗ್ರೆಸ್ ನಾಯಕ (Congress Leader) ರಾಹುಲ್‌ಗಾಂಧಿ (Rahul Gandhi) ಅವರ ಪೋಸ್ಟರ್‌ಗೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆಯುವ ಮೂಲಕ ಪ್ರತಿಭಟನೆ (Protest) ನಡೆಸಿದ್ದಾರೆ.
`ಸಾವರ್ಕರ್ (VD Savarkar) ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದರು. ಇದರಿಂದಾಗಿಯೇ ಅವರು ಪಿಂಚಣಿ ಪಡೆದುಕೊಳ್ಳುತ್ತಿದ್ದರು’ ಎಂಬ ರಾಹುಲ್‌ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ (BJP) ಕಾರ್ಯಕರ್ತರು ಪೋಸ್ಟರ್‌ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ರಾಮ್‌ಕದಮ್ ಪಕ್ಷದ ಇತರ ಕಾರ್ಯಕರ್ತರೊಂದಿಗೆ `ಚಪ್ಪಲಿ ಎಸೆಯಿರಿ’ ಆಂದೋಲನ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ದಲಿತರ ವಿರೋಧಿ, ದ್ವೇಷ ಹಬ್ಬಿಸುವ ಸರ್ಕಾರ: ರಾಹುಲ್ ಗಾಂಧಿ
Advertisement
Advertisement
ರಾಹುಲ್‌ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರನೊಬ್ಬನನ್ನು ಅವಮಾನಿಸಿದ್ದಾರೆ. ಪದೇ ಪದೇ ಈ ರೀತಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ಸಹಿಸಲಾಗುವುದಿಲ್ಲ. ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಹಿಮಪಾತ – ಬೆಂಗಳೂರಿನ ಇಬ್ಬರು ಸೇರಿದಂತೆ 29 ಮಂದಿ ಸಾವು
Advertisement
Advertisement
ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ (Bharath Jodo Yatra) ವೇಳೆ ರಾಹುಲ್ ಗಾಂಧಿ ಅವರು, `ಗಾಂಧಿ, ನೆಹರು ದೇಶಕ್ಕಾಗಿ ಹೋರಾಡಿದರು. ಆರ್‌ಎಸ್‌ಎಸ್ (RSS) ಹಾಗೂ ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದರು. ಬ್ರಿಟಿಷರಿಗೆ ಸಹಾಯ ಮಾಡಿದ್ದಕ್ಕಾಗಿಯೇ ಅವರಿಗೆ ಸ್ಟೈಫಂಡ್ ಸಿಕ್ಕಿತ್ತು ಎಂದು ಹೇಳಿದ್ದರು.