ಚಿಕ್ಕಬಳ್ಳಾಪುರ: ಬಿಜೆಪಿ ಕಾರ್ಯಕರ್ತರು (BJP Worker) ದೇವನಹಳ್ಳಿಯಿಂದ ಧರ್ಮಸ್ಥಳಕ್ಕೆ ʻಧರ್ಮ ಉಳಿಸಿ ಯಾತ್ರೆʼ ಕೈಗೊಂಡಿದ್ದಾರೆ.
ಧರ್ಮಸ್ಥಳದ (Darmasthala) ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಹಿಂದೂ ಧರ್ಮದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಅಂತ ʻಧರ್ಮ ಉಳಿಸಿʼ ಅಭಿಯಾನದ ಹೆಸರಲ್ಲಿ ದೇವನಹಳ್ಳಿಯಿಂದ ಧರ್ಮಸ್ಥಳಕ್ಕೆ ಧರ್ಮ ಉಳಿಸಿ ಯಾತ್ರೆ ಕೈಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಸೇರಿ ಜಿಲ್ಲೆಯ ನಾನಾ ಕಡೆಗಳಿಂದ 250ಕ್ಕೂ ಹೆಚ್ಚು ಕಾರುಗಳ ಮೂಲಕ ದೇವನಹಳ್ಳಿ ಬಳಿಯ ರಾಣಿ ಕ್ರಾಸ್ ನಲ್ಲಿ ಜಮಾಯಿಸಿ ಅಲ್ಲಿಂದ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದ್ದಾರೆ.
ದೇವನಹಳ್ಳಿ ಬಳಿ ಘಟನೆಯನ್ನ ಖಂಡಿಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನ ಕೂಗಿದರು. 2-3 ದಿನಗಳಲ್ಲಿ ಶೀಘ್ರ ತನಿಖೆ ಮುಗಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ.