ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubballi) ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕೂಡಲೇ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿಟಿ ರವಿ (CT Ravi) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ (Congress Corporator) ದೂರಿನ ಮೇಲೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಇದು ಮಹಿಳಾ ದೌರ್ಜನ್ಯ. ಕೂಡಲೇ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ದೇವರಾಜ ಅರಸ್ ಆಡಳಿತಕ್ಕೆ ಹೋಲಿಕೆ ಬೇಡ: ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಕಿಡಿ
ಇವರು ರಾಜಕೀಯ ಅಧಿಕಾರವನ್ನು ಬಳಸಿಕೊಂಡಿದ್ದಾರೆ. ಮಾನವೀಯ ಜಗತ್ತು ತಲೆ ತಗ್ಗಿಸುವಂತೆ ನಡೆದುಕೊಂಡಿದ್ದಾರೆ. ಮಹಿಳಾ ಆಯೋಗ ಸುಮೋಟೋ ಕೇಸ್ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು. ಸುಳ್ಳು ದೂರು ನೀಡಿರುವ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧವೂ ಕ್ರಮ ಆಗಬೇಕು. ಪೊಲೀಸರ ಕೃತ್ಯಕ್ಕೆ ಪ್ರಾಯಶ್ಚಿತ್ತ ಇಲ್ಲ. ಪೊಲೀಸರು ಕಾಂಗ್ರೆಸ್ ಕಾರ್ಪೊರೇಟರ್ ಅಡಿಯಾಳಿನಂತೆ ಕೆಲಸ ಮಾಡಿದ್ದಾರೆ. ಈ ಕೂಡಲೇ ಪೊಲೀಸರು, ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು ಎಂದರು. ಇದನ್ನೂ ಓದಿ: ಮಹಿಳೆಯೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್ ಇದೆ: ಹು-ಧಾ ಆಯುಕ್ತ ಶಶಿಕುಮಾರ್

