Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Bengaluru City

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Public TV
Last updated: February 19, 2026 7:27 pm
Public TV
Share
3 Min Read
BY Vijayendra
SHARE

ಬೆಂಗಳೂರು: ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಇದ್ದು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮಪಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಗುರುವಾರ (ಫೆ.19) ನಡೆದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ, ದಲಿತರ ಹತ್ಯೆ ಆಗುತ್ತಿದೆ ಎಂದು ಸುರತ್ಕಲ್, ಯಲ್ಲಾಪುರದಲ್ಲಿ ಆದ ಹತ್ಯೆಯನ್ನು ಉಲ್ಲೇಖಿಸಿದರು. ಯಲ್ಲಾಪುರದ ದಲಿತ ಮಹಿಳೆ ಹತ್ಯೆ, ಕೊಪ್ಪಳದಲ್ಲಿ ದಲಿತ ವ್ಯಕ್ತಿಯ ಹತ್ಯೆ ಆದರೂ ಪರಿಹಾರ ನೀಡಿಲ್ಲ. ಈ ಸರ್ಕಾರ ಬಂದ ಬಳಿಕ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಸೂರು ಮಾದಕವಸ್ತುಗಳಿಗೆ ಉಗಮ ಸ್ಥಾನವಾಗಿದೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡುವ ವ್ಯಕ್ತಿಯ ಕುಟುಂಬದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

ರಾಜ್ಯ ಸರ್ಕಾರದ ಚಳಿ ಬಿಡಿಸುವ ಕೆಲಸ:
ರಾಜ್ಯ ಸರ್ಕಾರದ ಚಳಿ ಬಿಡಿಸುವ ಕೆಲಸವನ್ನು ವಿಪಕ್ಷವಾದ ಬಿಜೆಪಿ ರಾಜ್ಯ ಘಟಕ ಮಾಡುತ್ತಲೇ ಬಂದಿದೆ. ಕಾರ್ಯಕರ್ತರ ಚುನಾವಣೆ ಮುಂದೆ ಬರಲಿದೆ. ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಜಿಬಿಎ ಚುನಾವಣೆಯೂ ಬರಲಿದೆ. ಈ ನಡುವೆ ವಿಧಾನಸಭೆಯ ಎರಡು ಉಪಚುನಾವಣೆಗಳು ಬರಲಿದೆ. ಬಾಗೇಪಲ್ಲಿ ಉಪಚುನಾವಣೆಯೂ ಇದ್ದು, ಸರಣಿ ಚುನಾವಣೆಗಳು ಮುಂದಿನ ಆರೇಳು ತಿಂಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಹಿರಿಯ ನಾಯಕರು, ಕೇಂದ್ರ ಸಚಿವರಾದ ಶ್ರೀ @gssjodhpur , ಜನನಾಯಕರು, ರೈತ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ @BSYBJP ಅವರು, ಕೇಂದ್ರ ಸಚಿವರಾದ ಶ್ರೀ @JoshiPralhad , ರಾಜ್ಯ ಉಸ್ತುವಾರಿ ಶ್ರೀ… pic.twitter.com/LrFDBDfhxI

— Vijayendra Yediyurappa (@BYVijayendra) February 19, 2026

ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಫಲಿತಾಂಶ ಬರಲಿ:
2028ರ ಚುನಾವಣೆಗೆ ಬಹಳ ದೂರ ಇಲ್ಲ. ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ನಾವು ಹಗಲು-ರಾತ್ರಿ ಶ್ರಮ ಹಾಕಬೇಕೆಂದು ವಿನಂತಿಸಿದರು. ಕರ್ನಾಟಕವು ದಕ್ಷಿಣ ಭಾರತದ ಹೆಬ್ಬಾಗಿಲು. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೊಮ್ಮೆ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಫಲಿತಾಂಶ ತರಬೇಕು. ಅಹಿಂದ ಹೆಸರು ಹೇಳಿಕೊಂಡು ರಾಜ್ಯದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯರ ಸರ್ಕಾರವು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಎಲ್ಲ ಹಿಂದುಳಿದ ಸಮುದಾಯಗಳನ್ನು, ಪರಿಶಿಷ್ಟ ಜಾತಿ, ಪಂಗಡಗಳ ಏಳಿಗೆಯನ್ನು ಸಂಪೂರ್ಣವಾಗಿ ಮರೆತಿದೆ ಎಂದು ಟೀಕಿಸಿದ್ದಾರೆ.ಇದನ್ನೂ ಓದಿ: ಕಮಲಕ್ಕೆ ಕೈ ಹಾಕಿದ ಕಾಂಗ್ರೆಸ್‌ – ಕಲಬುರಗಿ ಪಾಲಿಕೆಯಲ್ಲಿ ಈಗ ‘ಲೋಗೋ’ ಯುದ್ಧ!

ನರೇಂದ್ರ ಮೋದಿಜೀ ಅವರ ಸಮರ್ಥ ನಾಯಕತ್ವ:
ಬಿಜೆಪಿ ಜಗತ್ತಿನಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ದೇಶದ ನಾಯಕತ್ವ ಹೊಂದಿದ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ವಿಶ್ವಗುರುವಾಗುವ ಸಂಕಲ್ಪದೊಂದಿಗೆ ಅವರು ದೇಶವನ್ನು ಮುನ್ನಡೆಸುತ್ತಿದ್ದಾರೆ. ಸ್ವರಾಜ್ಯದ ಕನಸು ಬಿತ್ತಿದ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನೂ ಇವತ್ತು ಆಚರಿಸಲಾಗುತ್ತಿದೆ. ಇಂಥ ದೊಡ್ಡ ಪಕ್ಷದ ನೇತೃತ್ವವನ್ನು ಯುವಕ ನಿತಿನ್ ನಬೀನ್ ಜೀ ಅವರಿಗೆ ನೀಡಿದ್ದು, ಯುವಶಕ್ತಿಗೆ ಹೆಮ್ಮೆಯ ವಿಚಾರ. ನಿರ್ಮಲಾ ಸೀತಾರಾಮನ್ ಅವರ ಬಜೆಟ್ 2047ನೇ ಇಸವಿಗೆ ವಿಕಸಿತ ಭಾರತ ಸಂಕಲ್ಪಕ್ಕೆ ಪೂರಕ ಎಂದಿದ್ದಾರೆ.

ಭಾರತವನ್ನು ಯುಪಿಎ ಸರ್ಕಾರ ಇದ್ದಾಗ ಆರ್ಥಿಕವಾಗಿ ಗುರುತಿಸುತ್ತಿರಲಿಲ್ಲ. ಅಂಥ ಭಾರತವು ಇದೀಗ ಜಗತ್ತಿನ ನಾಲ್ಕನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮೋದಿಜೀ ಅವರ ದಿಟ್ಟ ನಾಯಕತ್ವ ಕಾರಣ. ವಿದೇಶಾಂಗ ನೀತಿ, ರಾಜತಾಂತ್ರಿಕ ನಡೆಯ ಪರಿಣಾಮವಾಗಿ ಯುರೋಪ್ ಒಕ್ಕೂಟವು ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಅಮೆರಿಕ ಕೂಡ ಭಾರತದ ಜೊತೆಗಿನ ಸಂಬಂಧ ಉತ್ತಮಪಡಿಸಲು ತೆರಿಗೆ ಪ್ರಮಾಣವನ್ನು ಇಳಿಸಿದೆ. ಮೋದಿಜೀ ಅವರಿಗೆ 25ಕ್ಕೂ ಹೆಚ್ಚು ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ಗೌರವ ನೀಡಿವೆ. ಇದು ಮೋದಿಜೀ ಅವರ ನಾಯಕತ್ವಕ್ಕೆ ಸಿಕ್ಕಿದ ಗೌರವ ಎಂದು ತಿಳಿಸಿದ್ದಾರೆ.

ದೇಶದ ಚುನಾವಣಾ ಆಯೋಗವು ಎಸ್‌ಐಆರ್ (ವಿಶೇಷ ಮತಪಟ್ಟಿ ಪರಿಷ್ಕರಣೆ) ಮಾಡುತ್ತಿದೆ. ರಾಜ್ಯದಲ್ಲೂ ಬರಲಿರುವ ಎಸ್‌ಐಆರ್ ಸಂಬಂಧ ಜಾಗ್ರತೆವಹಿಸಲು ಸಲಹೆ ನೀಡಿದರು. ವಿಬಿ ಜಿ ರಾಮ್ ಜಿ ಮೂಲಕ ಭ್ರಷ್ಟಾಚಾರ ತೊಡೆದುಹಾಕಲು ಬಡವರಿಗೆ ಅನುಕೂಲ ತರಲು ಸರ್ಕಾರ ಮುಂದಾಗಿದೆ. ಆದರೆ, ಇದರ ವಿರುದ್ಧ ಕಾಂಗ್ರೆಸ್ ಪಕ್ಷ ಅಪಪ್ರಚಾರ ಮಾಡುತ್ತಿದೆ ಹಾಗೂ ಹಳೆಯ ಚಾಳಿಯನ್ನು ಮುಂದುವರೆಸಿದೆ. ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಗೆಲುವು, ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜಯಭೇರಿಯು ಇಡೀ ದೇಶದ ಕಾರ್ಯಕರ್ತರು ಸಂಭ್ರಮಿಸಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ: ಗದಗದಲ್ಲಿ ಮತ್ತೆ ಕಿಡಿಗೇಡಿಗಳಿಂದ ಶಿವಲಿಂಗ, ಪಾಣಿಪೀಠ ಭಗ್ನ

TAGGED:bjpBY Vijayendracongresskarnatakaಕರ್ನಾಟಕಕಾಂಗ್ರೆಸ್ಬಿ.ವೈ.ವಿಜಯೇಂದ್ರಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
27 minutes ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
1 hour ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
1 hour ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
2 hours ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
2 hours ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?