ದಾವಣಗೆರೆ: ಕೇಂದ್ರ ಸರ್ಕಾರದ (Central Governmen) ಮಧ್ಯಂತರ ಬಜೆಟ್ ವಿರುದ್ಧ ಅಸಮಾಧಾನ ಹೊರಹಾಕುವ ವೇಳೆ ಸಂಸದ ಡಿ.ಕೆ ಸುರೇಶ್ (DK Suresh) ಪ್ರತ್ಯೇಕ ರಾಷ್ಟ್ರದ ಬಗ್ಗೆ ದನಿ ಎತ್ತಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವಮೋರ್ಚಾ ಘಟಕ ದೂರು ನೀಡಿದೆ.
ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆಯಿಂದ ದೇಶದ ಗೌರವಕ್ಕೆ ಮತ್ತು ಜನರ ಭಾವನೆಗಳಿಗೆ ಧಕ್ಕೆಯಾಗಿದೆ. ಇದು ಅಸಾಂವಿಧಾನಿಕ ಹೇಳಿಕೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮೂಲಕ ಎಸ್ಪಿ ಅವರಿಗೆ ಬಿಜೆಪಿ ಘಟಕ ದೂರು ನೀಡಿದೆ. ಮಹಾನಗರ ಪಾಲಿಕೆಯ ಸದಸ್ಯ ಶಿವಪ್ರಕಾಶ ನೇತೃತ್ವದಲ್ಲಿ ದೂರು ನೀಡಲಾಗಿದೆ.
Advertisement
Advertisement
ಡಿ.ಕೆ ಸುರೇಶ್ ಹೇಳಿದ್ದೇನು?
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಅನ್ಯಾಯ ಆದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: Loksabha Election: ಮಾಧುಸ್ವಾಮಿ ಬಳಿಕ ಮತ್ತೊಬ್ಬರಿಂದ ಸೋಮಣ್ಣ ಸ್ಪರ್ಧೆಗೆ ವಿರೋಧ!
Advertisement
ಕೇಂದ್ರದವರು ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂಥವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಆಗಿದ್ದರು. ಇದನ್ನೂ ಓದಿ: ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಫುಲ್ ಆಕ್ಟೀವ್- ದಿಶಾ ಸಭೆಯಲ್ಲಿ ಸಂಸದ ಕ್ಷಮೆ
Advertisement
ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆ ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ನಾಮಫಲಕ ಮಾತ್ರ ಬದಲಾಯಿಸಲಾಗಿದೆ. ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಆರ್ಥಿಕ ಸಮೀಕ್ಷೆ ಅವರು ಇಟ್ಟಿದ್ದಿದ್ರೆ ಇವರ ಪರಿಸ್ಥಿತಿ ಏನಾಗುತ್ತಿತ್ತು? ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನೋ ಅನುಮಾನಗಳು ಪ್ರಾರಂಭವಾಗಿದೆ. ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್ ಇದಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.