ಮಡಿಕೇರಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಇಲ್ಲಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಕೂಗಿದ್ದಾರೆ
ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟಿಸಿದರು.
ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು. ಇದನ್ನೂ ಓದಿ: Exclusive: ಮುಖಕ್ಕೆ ಮಾಸ್ಕ್ ಧರಿಸಿ ಕಲ್ಲು ಹೊಡೆಯಿರಿ – ಶಿವಮೊಗ್ಗ ಗಲಾಟೆಯ ಪ್ಲ್ಯಾನ್ ವೀಡಿಯೋ ಔಟ್
ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದೆ. ಅಷ್ಟೇ ಅಲ್ಲದೇ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಆರ್ಡರ್ ಮಾಡಿದ್ದ ಆಹಾರದಲ್ಲಿ ಹುಳಗಳು – ರೆಸ್ಟೋರೆಂಟ್ ವಿರುದ್ಧ ಮಹಿಳೆ ದೂರು
ಈ ಸಂದರ್ಭ ಪೋಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ ಸಿದ್ದರಾಮಯ್ಯರ ವಾಹನ ಮುಂದೆ ಚಲಿಸಲು ಅನುವುಮಾಡಿಕೊಟ್ಟರು.