ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ ಅಕ್ರೋಶ ಹೊರಹಾಕಿದೆ.
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರಹಾಕಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
Advertisement
Advertisement
ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರು ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿಲು ಮುಂದಾಗಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- 8 ಮಂದಿ ಶಂಕಿತರು ವಶಕ್ಕೆ
Advertisement
Advertisement
ಏನಿದು ಪ್ರಕರಣ?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.
ಈಗಾಗಲೇ ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗ್ರಹ ಕರೆದೊಯ್ಯಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.