ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚೇತನ್ (25) ಆತ್ಮಹತ್ಯೆ ಮಾಡಿಕೊಂಡವರು. ಇವರು ರಾಜಗೋಪಾಲನಗರ ವಾರ್ಡ್ ನ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿದ್ದಾರೆ.
ಚೇತನ್ ಅವರು ಇಂದು ಸಂಜೆ 7 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಮಾರುತಿನಗರದಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ಏನು ಅನ್ನೋದು ತಿಳಿದುಬಂದಿಲ್ಲ. ರಾಜಗೋಪಾಲನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.