– ವಕ್ಫ್ ಟ್ರಿಬ್ಯುನಲ್ ರದ್ದಾಗಬೇಕು ಎಂದು ಒತ್ತಾಯ
ಬೆಂಗಳೂರು: ಕರ್ನಾಟಕದಲ್ಲಿ 6 ಲಕ್ಷ ಎಕರೆಯನ್ನು ವಕ್ಫ್ ಆಸ್ತಿ ಮಾಡಲು ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಕ್ಫ್ ದೊಡ್ಡ ಅನ್ಯಾಯ. ರೈತರು, ಮಠಗಳು ಸೇರಿ ಎಲ್ಲರಿಗೂ ಇದರಿಂದ ಸಮಸ್ಯೆ ಆಗಿದೆ. ವಕ್ಫ್ ಟ್ರಿಬ್ಯುನಲ್ ರದ್ದಾಗಬೇಕು. ವಕ್ಫ್ ಟ್ರಿಬ್ಯುನಲ್ ಒಂದು ಶಾಪ ಆಗಿದೆ. ಹೀಗಾಗಿ, ನ್ಯಾಯಾಲಯದ ಮೂಲಕವೇ ಎಲ್ಲವೂ ಇತ್ಯರ್ಥ ಆಗಬೇಕು. ಈಗ 2,700 ಎಕರೆ ಜಾಗ ಖಬರ್ ಸ್ತಾನಗೆ ಕೊಡೋಕೆ ಸರ್ಕಾರ, ಕಂದಾಯ ಇಲಾಖೆ ನಿರ್ಣಯ ಮಾಡಿದೆ. ವಕ್ಫ್‌ಗೆ (Waqf Row) ಎಷ್ಟು ಜಾಗ ತಗೋಬೋದು ಅಂತಾ ಅವರು ಲೀಸ್ಟ್ ಮಾಡಿದ್ದಾರೆ. ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿ ಮಾಡಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯದಲ್ಲಿ ಗಂಡಸರಿಗೂ ಫ್ರೀ ಬಸ್ ಪ್ರಯಾಣ ಭಾಗ್ಯ? – ಸುಳಿವು ಕೊಟ್ಟ ಡಿಕೆಶಿ
ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡುಗೆ ಅವರು ಧಮ್ಕಿ ಹಾಕುತ್ತಿದ್ದಾರೆ. ನಾವು ಅಭಿಯಾನ ಮಾಡಿ ಮಾಹಿತಿ ಪಡೆದು JPCಗೆ ವರದಿ ಕೊಡ್ತೀವಿ. ಜನಜಾಗೃತಿಗಾಗಿ ಈ ಅಭಿಯಾನ ಮಾಡ್ತಿದ್ದೇವೆ. ರಾಜ್ಯ, ಕೇಂದ್ರ ಸರ್ಕಾರ ಎರಡಕ್ಕೂ ನಾವು ಈ ಒತ್ತಾಯ ಮಾಡ್ತಿದ್ದೇವೆ. ಜಮೀರ್ ಬಂದು ಭಾಷಣ ಮಾಡ್ತಾರೆ. ಸೌತಾನ್ ಅಂತ ಮಾತಾಡಿ ಪ್ರಚೋದನೆ ಮಾಡ್ತಾರೆ. ಅಧಿಕಾರಿಗಳಿಗೆ ಧಮ್ಕಿ ಹಾಕಿ ನೋಟಿಸ್ ಕೊಡಿ ಜಮೀರ್ ಹೇಳ್ತಿದ್ದಾರೆ. ಅಧಿಕಾರಿಗಳು ಭಯ ಬಿದ್ದಿದ್ದಾರೆ. ಹೀಗಾಗಿ, ಕೇಂದ್ರದ ನಿರ್ಧಾರ ಆಗೋವರೆಗೂ ನೀವು ಯಾವುದೇ ದಾಖಲಾತಿ ಮಾಡಬೇಡಿ ಅಂತಾ ಅಧಿಕಾರಿಗಳಿಗೆ ಸೂಚನೆ ಕೊಟ್ಡಿದ್ದೇವೆ ಎಂದು ತಿಳಿಸಿದರು.
ವಕ್ಫ್ ಟ್ರಿಬ್ಯುನಲ್ ರದ್ದು ಆಗಬೇಕು ಅನ್ನೋದು ನಮ್ಮ ಮೊದಲ ಬೇಡಿಕೆ. ಇದು ಆಗಲೇಬೇಕು. ಹೀಗಾಗಿ, ಜನ ಜಾಗೃತಿ ಅಭಿಯಾನ ಮಾಡ್ತಿದ್ದೇವೆ. ನೋಟಿಸ್ ಕೊಟ್ಟು ಕೆಲವು ಈಗ ವಾಪಸ್ ಪಡೆದಿದ್ದಾರೆ. ಆದರೆ, ಅನೇಕ ಕಡೆ ನೋಟಿಸ್ ಕೊಡದೇ ದಾಖಲಾತಿ ವಕ್ಫ್ ಮಾಡಿದ್ದಾರೆ. ಬಿಜೆಪಿ ಪಕ್ಷದಿಂದಲೇ ಇದರ ವಿರುದ್ಧ ಹೋರಾಟ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೀದರ್ | ಬರೋಬ್ಬರಿ 13,295 ಎಕರೆ ಆಸ್ತಿ ವಕ್ಫ್ ಪಾಲು!