ಇಂಫಾಲ್: ಮಣಿಪುರದಲ್ಲಿ ಮುಂದಿನ 25 ವರ್ಷಗಳವರೆಗಿನ ಅಭಿವೃದ್ಧಿಗೆ ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರವು ಅಡಿಪಾಯ ಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.
ಮಣಿಪುರದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವು ಮಣಿಪುರದ ಸರ್ವಾಂಗೀಣ ಅಭಿವೃದ್ಧಿಗೂ ಶ್ರಮಿಸಿದೆ. ಜೊತೆಗೆ ಮುಂದಿನ 25 ವರ್ಷಗಳ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದೇವೆ. ಬಿಜೆಪಿಯ ಉತ್ತಮ ಆಡಳಿತ ಹಾಗೂ ಸದುದ್ದೇಶವನ್ನು ನೀವೂ ನೋಡಿದ್ದೀರಿ. ಇದರಿಂದಾಗಿ ಪುನಃ ಮಣಿಪುರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮಣಿಪುರ ರಚನೆಯಾಗಿ ಕಳೆದ ತಿಂಗಳಿಗೆ 50 ವರ್ಷಗಳು ಪೂರ್ಣಗೊಂಡಿದೆ. ಈ ವೇಳೆ ರಾಜ್ಯದಲ್ಲಿ ಹಲವಾರು ಸರ್ಕಾರಗಳು ಬಂದು ಹೋಗಿವೆ. ಆದರೆ ದಶಕಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್‍ನಿಂದ ರಾಜ್ಯವೂ ಅಸಮಾನತೆಗೆ ಕಾರಣವಾಗಿತ್ತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹರ್ಷ ಕುಟುಂಬಕ್ಕೆ 1 ಲಕ್ಷ ರೂ. ನೆರವು ಘೋಷಿಸಿದ ಶಾಸಕ ಅರವಿಂದ ಲಿಂಬಾವಳಿ
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಅಸಾಧ್ಯವಾದುದ್ದನ್ನು ಸಾಧ್ಯ ಮಾಡಿ ತೋರಿಸಿದೆ. ಮಣಿಪುರದ ಕೆಲವು ಪ್ರದೇಶಗಳಲ್ಲಿ ಇದ್ದ ನಿರ್ಬಂಧವನ್ನು ತೆರವುಗೊಳಿಸಿದೆ. ಯುವಕರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದಾರೆ ಮತ್ತು ರಾಜ್ಯವನ್ನು ಅಭಿವೃದ್ಧಿಯತ್ತ ಮುನ್ನಡೆಸಲು ಮುಂದೆ ಬರುತ್ತಿದ್ದಾರೆ ಎಂದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಹಿಂಸಾಚಾರ, ಶಾಲಾ- ಕಾಲೇಜುಗಳಿಗೆ ರಜೆ: ಸೋಮವಾರ ನಡೆದಿದ್ದು ಏನು?
ಮಣಿಪುರ ವಿಧಾನಸಭಾ ಚುನಾವಣೆಯ ಮತದಾನವು ಮಾ. 5ರಂದು ನಡೆದರೆ ಮಾ.10ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪ್ರಬಲ ಪೈಪೋಟಿಯಲ್ಲಿದೆ.