– ವಿನೇಶ್ ಒಲಿಂಪಿಕ್ಸ್ ಅನರ್ಹತೆ ಕುರಿತು ಟೀಕಿಸಿದ್ದ ಮಾಜಿ ಸಂಸದ
ನವದೆಹಲಿ: ಒಲಿಂಪಿಕ್ಸ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ವಿರುದ್ಧ ಹೇಳಿಕೆ ನೀಡದಂತೆ ಮಾಜಿ ಸಂಸದ ಹಾಗೂ ಕುಸ್ತಿ ಸಂಸ್ಥೆಯ (Wrestling Federation of India) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರಿಗೆ ಬಿಜೆಪಿ (BJP) ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
Advertisement
ಹರಿಯಾಣ ವಿಧಾನಸಭಾ ಚುನಾವಣೆಗು ಮುನ್ನ ವಿನೇಶ್, ಪುನಿಯಾ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಾರೆ. ಈ ವಿಚಾರವಾಗಿ ಡಬ್ಲ್ಯುಎಫ್‍ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಇಬ್ಬರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡದಂತೆ ಬ್ರಿಜ್ ಭೂಷಣ್ ಅವರಿಗೆ ಪಕ್ಷದ ಹಿರಿಯ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Advertisement
Advertisement
ಮಾಧ್ಯಮಗಳೊಂದಿಗೆ ಮಾತನಾಡುತ್ತ ಬ್ರಿಜ್ ಭೂಷಣ್ ಸಿಂಗ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರು ಕುಸ್ತಿಯಲ್ಲಿ ಹೆಸರು ಮಾಡಿದ್ದಾರೆ. ಆದರೆ ಕಾಂಗ್ರೆಸ್ ಸೇರಿದ ನಂತರ ಅವರ ಹೆಸರುಗಳು ಅಳಿಸಿ ಹೋಗಲಿವೆ. ತಾವು ವಿಧಾನಸಭೆ ಚುನಾವಣೆಯಲ್ಲಿ ಗೆದ್ದುಬಿಡುತ್ತೇವೆ ಎಂದು ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ಭಾವಿಸಿದ್ದರೆ ಅದು ತಪ್ಪು. ಅವರು ಹರ್ಯಾಣದ ಯಾವುದೇ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದರೂ, ಬಿಜೆಪಿಯ ಸಣ್ಣ ಅಭ್ಯರ್ಥಿ ಕೂಡ ಅವರನ್ನು ಸೋಲಿಸುತ್ತಾರೆ ಎಂದು ಸಿಂಗ್ ಹೇಳಿದ್ದರು.
Advertisement
ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದಾಗ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್, ಇದು ಕಾಂಗ್ರೆಸ್ ಪಕ್ಷವು ತಮ್ಮ ವಿರುದ್ಧ ನಡೆಸಿದ್ದ ಸಂಚು. ಇದಕ್ಕೆ ಫೋಗಟ್ ಹಾಗೂ ಪೂನಿಯಾ ಅವರ ಕಾಂಗ್ರೆಸ್ ಸೇರ್ಪಡೆ ಸಾಕ್ಷಿ ಎಂದು ಹೇಳಿದ್ದರು.
ಅನರ್ಹಗೊಂಡ ವಿನೇಶ್‍ಗೆ ದೇವರೇ ಶಿಕ್ಷೆ ನೀಡಿದ್ದಾನೆ!
ಪ್ರತಿಭಟನೆ ಆರಂಭಿಸಿದ ದಿನವೇ, ಇದರ ಹಿಂದೆ ಕಾಂಗ್ರೆಸ್ (Congress) ಪಾತ್ರವಿದೆ ಎಂದು ಹೇಳಿದ್ದೆ. ಈಗ ಅದೇ ನಿಜವಾಗಿದೆ. ಕಾಂಗ್ರೆಸ್ ಸಂಚಿಗೆ ವಿನೇಶ್ ಮತ್ತು ಬಜರಂಗ್ ದಾಳವಾಗಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಪಕ್ಷ ಇಂತಹ ಕೆಲಸಗಳನ್ನು ಮಾಡುತ್ತಲೇ ಇರುತ್ತದೆ. ಇದಕ್ಕಾಗಿ ಭೂಪಿಂದರ್ ಹೂಡಾ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕುಟುಂಬ ಕುಸ್ತಿಪಟುಗಳನ್ನು ದಾಳವಾಗಿ ಬಳಸಿಕೊಂಡಿದೆ ಎಂದು ಕಿಡಿಕಾರಿದ್ದರು.
ಈ ವೇಳೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಂತಿಮ ಹಂತದಲ್ಲಿ ಅನರ್ಹಗೊಂಡ ವಿನೇಶ್‍ಗೆ ದೇವರೇ ಶಿಕ್ಷೆ ನೀಡಿದ್ದಾನೆ ಎಂದು ಬ್ರಿಜ್‍ಭೂಷಣ್ ಹೇಳಿದ್ದರು.
ಮುಂದುವರಿದು, ಒಬ್ಬ ಆಟಗಾರ ಒಂದು ದಿನದಲ್ಲಿ 2 ತೂಕದ ವಿಭಾಗಗಳಲ್ಲಿ ಟ್ರಯಲ್ಸ್ ನೀಡಬಹುದೇ ಎಂದು ನಾನು ವಿನೇಶ್ ಅವರನ್ನು ಕೇಳಲು ಬಯಸುತ್ತೇನೆ. ತೂಕದ ನಂತರ 5 ಗಂಟೆಗಳ ಕಾಲ ಪ್ರಯೋಗ ನಿಲ್ಲಿಸಬಹುದೇ? ನೀವು ಕುಸ್ತಿಯನ್ನು ಗೆಲ್ಲಲಿಲ್ಲ, ನೀವು ಮೋಸದಿಂದ ಅಲ್ಲಿಗೆ ಹೋಗಿದ್ದೀರಿ. ದೇವರು ನಿಮಗೆ ಅದೇ ಶಿಕ್ಷೆ ನೀಡಿದ್ದಾನೆ ಎಂದು ಲೇವಡಿ ಮಾಡಿದ್ದರು. ಇದು ಟೀಕೆಗೆ ಕಾರಣವಾಗಿತ್ತು.