ಬೆಂಗಳೂರು/ಮೈಸೂರು: ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ (BJP) ಇಂದಿನಿಂದ ‘ಜನಾಕ್ರೋಶ ಯಾತ್ರೆ’ (Janakrosha Yatra) ಕೈಗೊಂಡಿದೆ. ಇಂದು ಮಧ್ಯಾಹ್ನ 3:15ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಯಾತ್ರೆ ಆರಂಭಗೊಳ್ಳಲಿದೆ.
ಸಂಜೆ 4 ಗಂಟೆಗೆ ಮೈಸೂರು ಲಷ್ಕರ್ ಮೊಹಲ್ಲಾದ ಅಂಚೆ ಕಚೇರಿ ಬಳಿಯಿಂದ ಯಾತ್ರೆ ಆರಂಭಗೊಳ್ಳಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಅಶೋಕ ರಸ್ತೆಯಲ್ಲಿ ಸಾಗಿ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಯಲಿದೆ. ಯಾತ್ರೆಯ ನಂತರ ಗಾಂಧಿ ವೃತ್ತದ ಬಳಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಯಲಿದೆ. ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲೇ ಇಬ್ಬರು ಬ್ರಿಟನ್ ಸಂಸದರ ಬಂಧನ – ಇಸ್ರೇಲ್ ವಿರುದ್ಧ ಸಿಡಿದ ಯುಕೆ
ಈ ಜನಾಕ್ರೋಶ ಯಾತ್ರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿರೋಧ ಪಕ್ಷದ ವಿಧಾನ ಪರಿಷತ್ತಿನ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್, ವಿಧಾನ ಪರಿಷತ್ತಿನ ಸದಸ್ಯರಾದ ಸಿ.ಟಿ ರವಿ, ರವಿಕುಮಾರ್, ಮಾಜಿ ಸಚಿವರಾದ ಬಿ ಶ್ರೀರಾಮುಲು, ಸಂಸದ ಯದುವೀರ್ ಕೃಷ್ಣರಾಜದತ್ತ ಒಡೆಯರ್, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕರಾದ ಭೈರತಿ ಬಸವರಾಜ್, ಟಿಎಸ್ ಶ್ರೀವತ್ಸ, ಪ್ರೀತಮ್ ಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಪತ್ನಿಗೆ ಬರೆದಿದ್ದಾರೆ ಎನ್ನಲಾದ ಪತ್ರ ವೈರಲ್
ಎಲ್ಲಿ, ಯಾವಾಗ ಜನಾಕ್ರೋಶ ಯಾತ್ರೆ?
ಏಪ್ರಿಲ್ 7-12ರ ವರೆಗೆ ಮೊದಲ ಹಂತದ ಜನಾಕ್ರೋಶ ಯಾತ್ರೆಯು ಮೈಸೂರು/ಚಾಮರಾಜನಗರ, ಮಂಡ್ಯ,/ಹಾಸನ, ಕೊಡಗು/ಮಂಗಳೂರು, ಉಡುಪಿ/ಚಿಕ್ಕಮಗಳೂರು, ಶಿವಮೊಗ್ಗ/ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಡೆಯಲಿದೆ.
ಏಪ್ರಿಲ್ 15-18ರವರೆಗೆ ಎರಡನೇ ಹಂತದ ಜನಾಕ್ರೋಶ ಯಾತ್ರೆಯು ನಿಪ್ಪಾಣಿ/ಬೆಳಗಾವಿ/ಹುಬ್ಬಳ್ಳಿ, ಬೀದರ್/ಕಲಬುರಗಿ, ವಿಜಯಪುರ/ಬಾಗಲಕೋಟೆಗಳಲ್ಲಿ ನಡೆಯಲಿದೆ.
ಏಪ್ರಿಲ್ 21-25ರವರೆಗೆ ಮೂರನೇ ಹಂತದ ಯಾತ್ರೆಯು ಯಾದಗಿರಿ/ರಾಯಚೂರು, ಬಳ್ಳಾರಿ/ವಿಜಯನಗರ, ಕೊಪ್ಪಳ/ಗದಗ, ಹಾವೇರಿ/ದಾವಣಗೆರೆ, ಚಿತ್ರದುರ್ಗ/ತುಮಕೂರು ಜಿಲ್ಲೆಗಳಲ್ಲಿ ನಡೆಯಲಿದೆ.
ಏಪ್ರಿಲ್ 27- ಮೇ 03ರ ವರೆಗೆ ನಾಲ್ಕನೇ ಹಂತದ ಯಾತ್ರೆ ಚಿಕ್ಕಬಳ್ಳಾಪುರ/ಕೋಲಾರ, ಬೆಂಗಳೂರು/ಬೆAಗಳೂರು ಗ್ರಾಮಾಂತರ/ರಾಮನಗರ ಜಿಲ್ಲೆಗಳಲ್ಲಿ ನಡೆಯಲಿದೆ. ಇದನ್ನೂ ಓದಿ: ವಿಧಾನಸೌಧ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ದರಾಮಯ್ಯ ಚಾಲನೆ