ಬೆಳಗಾವಿ: ಬಿಜೆಪಿಯವರಿಗೆ (BJP) ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ. ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗದಿರುವುದು ವಿಪರ್ಯಾಸ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ (Belagavi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯವರಿಗೆ ಆಪರೇಷನ್ ಕಮಲದ (Operation Kamala) ರುಚಿ ಹಿಡಿದಿದೆ. ಈ ಅಸ್ತ್ರ ಪ್ರಯೋಗಿಸಿ ಏಳೆಂಟು ರಾಜ್ಯಗಳಲ್ಲಿ ಅಧಿಕಾರ ಹಿಡಿದಿದ್ದಾರೆ. ಆದರೆ ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ ಎಂದರು. ಇದನ್ನೂ ಓದಿ: ಲಾ ಓದ್ಬೇಡ ಎಂದಿದ್ದ ಶಾನುಭೋಗರ ಆಸ್ತಿಗೆ ನಾನೇ ಲಾಯರ್ ಆದೆ: ಸಿಎಂ
Advertisement
Advertisement
ಇದೇ ವೇಳೆ ಎರಡೂವರೆ ವರ್ಷದ ಬಳಿಕ ಸಿಎಂ ಬದಲಾಗುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ (Siddaramaiah) ನಮ್ಮ ಮುಖ್ಯಮಂತ್ರಿ. ಈಗ ಸರ್ಕಾರ ಸುಭದ್ರವಾಗಿದೆ. ನಾವು ಯಾವುದೇ ವದಂತಿಗಳಿಗೆ ಕಿವಿಗೊಡುವುದಿಲ್ಲ. ಎರಡೂವರೆ ವರ್ಷ ಬಳಿಕ ಸಿಎಂ ಬದಲಾವಣೆ ಆಗುವ ಕುರಿತು ಯಾವುದೇ ಒಪ್ಪಂದ, ಮಾತುಕತೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಜನವರಿಯಲ್ಲಿ ಜಾತಿಗಣತಿ ವರದಿ ಸ್ವೀಕಾರ: ಸಿದ್ದರಾಮಯ್ಯ
Advertisement
ಚುನಾವಣೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ಮಂತ್ರಿ ಆಗುವ ಆಸೆಯಿಂದ ಒಂದಿಬ್ಬರು ಶಾಸಕರು ಅಸಮಾಧಾನದಿಂದ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿರಬಹುದು. ಅದು ಸರಿಯಲ್ಲ. ಅವರು ಹೇಳಿಕೆ ಕೊಟ್ಟ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾಗುವುದಿಲ್ಲ. ಶಾಸಕರು ಹೀಗೆ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಆಡಳಿತದಲ್ಲಿ ಕರ್ನಾಟಕಕ್ಕೆ ಗ್ರಹಣ- ಬಿಜೆಪಿ ವ್ಯಂಗ್ಯ
Advertisement
ಬಿಜೆಪಿ ಮತ್ತು ಜೆಡಿಎಸ್ (JDS) ಬಣ್ಣ ಈಗ ಬಯಲಾಗಿದೆ. ತಾವಿಬ್ಬರೂ ಸೇರದಿದ್ದರೆ ಉಳಿಗಾಲವಿಲ್ಲ ಎಂದು ಹೆದರಿ ಒಂದಾಗಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ (Congress) ಅನುಕೂಲವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: KEA ಪರೀಕ್ಷೆ- ಉದ್ದ ತೋಳಿನ ಶರ್ಟ್ ಧರಿಸಿದ್ದ ಪರೀಕ್ಷಾರ್ಥಿಗಳಿಗೆ ಶಾಕ್
Web Stories