ಚೆನ್ನೈ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ಗೆಲುವು ಸಾಧಿಸಿದ ಕಾಂಗ್ರೆಸ್‍ಗೆ (Congress) ತಮಿಳುನಾಡಿನ ಬಿಜೆಪಿ (BJP) ಅಧ್ಯಕ್ಷ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಜನಾದೇಶವನ್ನು ಪಡೆದಿದೆ. ಜನರಿಗೆ ಅವರು ನೀಡಿದ ಭರವಸೆಗಳನ್ನು ಈಡೇರಿಸಲಿ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಬಿಜೆಪಿಯನ್ನು ಬೆಂಬಲಿಸಿ ಮತ ನೀಡಿದ ಜನರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿ ಪುಟಿದೇಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಅಲೆ ಮುಗಿದಿದೆ, ಬಜರಂಗ ಬಲಿ ಕಾಂಗ್ರೆಸ್ ಜೊತೆಗಿದೆ: ಸಂಜಯ್ ರಾವತ್
Advertisement
Advertisement
ಅಣ್ಣಾಮಲೈ (Annamalai) ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಪ್ರಚಾರದ ವೇಳೆ ಬಿಜೆಪಿ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದರು. ಆದರೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು ಬಹುಮತ ಗಳಿಸಿದೆ. ಬಿಜೆಪಿಗೆ 65 ಸ್ಥಾನಗಳು ಮಾತ್ರ ಲಭಿಸಿವೆ. ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ ಒಂದು ಸ್ಥಾನ ಗಳಿಸಿಕೊಂಡಿವೆ.
Advertisement
Advertisement
36 ವರ್ಷಗಳ ನಂತರ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ರಾಜೂಗೌಡಗೆ ಸೋಲು- ಅಭಿಮಾನಿಗೆ ಆಘಾತ, ಆಸ್ಪತ್ರೆಗೆ ದಾಖಲು