ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಹೋದರಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬಾಂಧವ್ಯದ ಬಗ್ಗೆ ಮಧ್ಯಪ್ರದೇಶ ನಗಾರಾಭಿವೃದ್ಧಿ ಸಚಿವ, ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ.
ಭೋಪಾಲ್‌ನಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತಾಡಿ, ನಮ್ಮ ಸಹೋದರಿಯರ ಹಳ್ಳಿಯಲ್ಲಿ ನಾವು ನೀರನ್ನು ಕೂಡ ಕುಡಿಯಲ್ಲ. ಆದರೆ, ಇಂದಿನ ವಿರೋಧ ಪಕ್ಷದ ನಾಯಕರು ತಮ್ಮ ತಂಗಿಯನ್ನು ರಸ್ತೆಯಲ್ಲಿ ಮುದ್ದಿಸುತ್ತಾರೆ. ನಮ್ಮಲ್ಲಿ ಯಾರಾದರೂ ಈ ರೀತಿ ಮಾಡ್ತಾರಾ..? ಅದು ಅವರ ವಿದೇಶಿ ಮೌಲ್ಯಗಳನ್ನು ತೋರಿಸುತ್ತೆ ಅಂದಿದ್ದಾರೆ.
ಇದಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಕೈಲಾಶ್ ವಿಜಯವರ್ಗೀಯವರು ಪವಿತ್ರ ಸಹೋದರ-ಸಹೋದರಿಯರ ಬಾಂಧವ್ಯವನ್ನು ಅವಮಾನಿಸಿದ್ದಾರೆ. ಇಂತಹ ನಾಚಿಕೆಯಿಲ್ಲದ ಹೇಳಿಕೆಗೆ ಪ್ರತಿಕ್ರಿಯಿಸಲು ನಮಗೆ ನಾಚಿಕೆಯಾಗುತ್ತದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿತು ಪಟ್ವಾರಿ ಕಿಡಿಕಾರಿದ್ದಾರೆ.