ನವದೆಹಲಿ: ಬಿಜೆಪಿ (BJP) ತನ್ನ ಹೊಸ ರಾಷ್ಟ್ರಾಧ್ಯಕರ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದು, ಪ್ರಮುಖ ಪ್ರದೇಶಗಳಲ್ಲಿ ರಾಜ್ಯಾಧ್ಯಕ್ಷರನ್ನು ಅಂತಿಮಗೊಳಿಸಲು ಪಕ್ಷದ ಉನ್ನತ ಮಟ್ಟದ ನಾಯಕರು ಚರ್ಚೆ ನಡೆಸಿದ್ದಾರೆ. ಮಂಗಳವಾರ (ಏ.15) ರಾತ್ರಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಾಲಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಹಿರಿಯ ನಾಯಕರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈಗಾಗಲೇ 14 ರಾಜ್ಯಾಧ್ಯಕ್ಷರನ್ನು ನೇಮಿಸಲಾಗಿದೆ. ಆದರೆ ಪಕ್ಷದ ಸಂವಿಧಾನದ ಪ್ರಕಾರ ರಾಷ್ಟ್ರೀಯ ಅಧ್ಯಕ್ಷೀಯ ಚುನಾವಣೆಯನ್ನು ನಡೆಸುವ ಮೊದಲು ಕನಿಷ್ಠ 19 ರಾಜ್ಯಗಳಲ್ಲಿ ಚುನಾವಣೆ ನಡೆಸಬೇಕು. ಈ ಹಿನ್ನೆಲೆ ಬಾಕಿ ಐದು ರಾಜ್ಯಗಳ ಅಧ್ಯಕ್ಷರ ಬದಲಾವಣೆಗೆ ಬಗ್ಗೆ ಚರ್ಚೆ ನಡೆದಿದೆ ಎಂದು ಉನ್ನತ ಮೂಲಗಳು ಹೇಳಿವೆ.ಇದನ್ನೂ ಓದಿ: ಚಿಕ್ಕಮಗಳೂರು | ಸುಗ್ಗಿ ಹಬ್ಬದ ಜಾತ್ರಾ ಮಹೋತ್ಸವದಲ್ಲಿ ಗನ್ ಹಿಡಿದು ಗುರಿಯಿಟ್ಟ ಸಿ.ಟಿ ರವಿ
ಬಿಜೆಪಿ ಹೈಕಮಾಂಡ್ (BJP High Command) ನಾಯಕರು ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ಮತ್ತು ಒಡಿಶಾ ರಾಜ್ಯಗಳಿಗೆ ಹೊಸ ರಾಜ್ಯ ಘಟಕದ ಮುಖ್ಯಸ್ಥರ ನೇಮಕದ ಕುರಿತು ಚರ್ಚೆ ನಡೆಸಿದ್ದಾರೆ. ಉಳಿದ ಪ್ರಮುಖ ರಾಜ್ಯಗಳ ರಾಜ್ಯಾಧ್ಯಕ್ಷರ ಹೆಸರುಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸುವ ಸಾಧ್ಯತೆಯಿದೆ. ಈ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ, ಬಿಜೆಪಿಯ ರಾಷ್ಟ್ರೀಯ ಚುನಾವಣಾ ಅಧಿಕಾರಿ ಮುಂದಿನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ವೇಳಾಪಟ್ಟಿಯನ್ನು ಔಪಚಾರಿಕವಾಗಿ ಘೋಷಣೆ ಮಾಡಬಹುದು.
ಮೂಲಗಳ ಪ್ರಕಾರ, ಈ ತಿಂಗಳ ಅಂತ್ಯದ ವೇಳೆಗೆ ಅಥವಾ ಮುಂದಿನ ತಿಂಗಳ ಆರಂಭದಲ್ಲಿ ಚುನಾವಣೆ ನಡೆಯಬಹುದು. ಹವಾಮಾನ ವೈಪರೀತ್ಯದಿಂದಾಗಿ ಜಮ್ಮುವಿಗೆ ನಿಗದಿಪಡಿಸಲಾಗಿದ್ದ ಭೇಟಿಯನ್ನು ಮುಂದೂಡಲಾಗಿದ್ದರಿಂದ, ಪ್ರಧಾನಿಯವರ ವೇಳಾಪಟ್ಟಿಯಲ್ಲಿ ಸಂಬಂಧವಿಲ್ಲದ ಬದಲಾವಣೆಗಳ ಮಧ್ಯೆ ಆಂತರಿಕ ಬೆಳವಣಿಗೆಗಳು ಸಂಭವಿಸಿವೆ. ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ಪ್ರಧಾನಿ ಮತ್ತು ರಾಷ್ಟ್ರಪತಿಗಳ ನಡುವಿನ ಇತ್ತೀಚಿನ ಸಭೆಯನ್ನು ನಿಯಮಿತ ಶಿಷ್ಟಾಚಾರ ಎಂದು ವಿವರಿಸಲಾಗಿದೆ.
ಈ ಬೆಳವಣಿಗೆಗಳ ಆಧಾರದ ಮೇಲೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಮಹತ್ವದ ಬೆಳವಣಿಗೆಯಾಗುವ ಸಾಧ್ಯತೆಗಳಿದೆ. ಬಿ.ವೈ ವಿಜಯೇಂದ್ರ (BY Vijayendra) ಅವರನ್ನು ಬದಲಿಸಬೇಕು ಎನ್ನುವ ಒತ್ತಡಗಳಿದ್ದು, ಹೈಕಮಾಂಡ್ ವಿಜಯೇಂದ್ರ ಅವರನ್ನು ಬದಲಿಸಲಿದೆಯಾ ಅಥವಾ ಮುಂದುವರಿಸಲಿದೆಯಾ ಎನ್ನುವುದು ತಿಂಗಳಾಂತ್ಯಕ್ಕೆ ತಿಳಿಯಲಿದೆ.ಇದನ್ನೂ ಓದಿ: ಮುಸ್ಲಿಮರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದೀರಿ: ವಿಜಯ್ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಜಮಾತ್