– ಪರಿಕ್ಕರ್ ಅಂತ್ಯಕ್ರಿಯೆ ಬೆನ್ನಲ್ಲೆ ಸರ್ಕಾರ ರಚನೆ
– ರಾತ್ರೋರಾತ್ರಿ ಮುಗಿದೇ ಹೋಯ್ತು ಕಾರ್ಯಕ್ರಮ
ಪಣಜಿ: ಗೋವಾ ನೂತನ ಸಿಎಂ ಆಗಿ ಪ್ರಮೋದ್ ಸಾವಂತ್ ರಾತ್ರೋರಾತ್ರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಮಹಾರಾಷ್ಟ್ರವಾದಿ ಗೋಮಂತಕ್ ಪಾರ್ಟಿ (ಎಂಜಿಪಿ)ಯ ಸುದೀನ್ ದಾವಲೀಕರ್ ಮತ್ತು ಗೋವಾ ಫಾವರ್ಡ್ ಪಾರ್ಟಿ (ಜಿಎಫ್‍ಪಿ)ಯ ವಿಜಯ್ ಸರ್ದೇಸಾಯಿ ಕೂಡಾ ಪ್ರಮಾಣ ವಚನ ಸ್ವೀಕರಿಸಿದರು.
11 ಗಂಟೆಗೆ ನಡೆಯಬೇಕಿದ್ದ ಕಾರ್ಯಕ್ರಮ ವಿವಿಧ ಕಾರಣಗಳಿಂದಾಗಿ ತಡವಾಯಿತು. ಮಧ್ಯರಾತ್ರಿ 2 ಗಂಟೆ ವೇಳೆಗೆ ರಾಜಭವನದಲ್ಲಿ ಪ್ರಮೋದ್ ಸಾವಂತ್, 11 ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಗವರ್ನರ್ ಭೇಟಿಯಾದ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಿಜೆಪಿ ಮೈತ್ರಿಪಕ್ಷದ ಶಾಸಕರ ಬೆಂಬಲ ಪತ್ರವನ್ನು ನೀಡಿದರು. ಪ್ರಮೋದ್ ಸಾವಂತ್ ಗೋವಾ ಸ್ಪೀಕರ್ ಆಗಿ ಕಾರ್ಯ ನಿರ್ವಸುತ್ತಿದ್ದರು. ದೊಡ್ಡ ಪಕ್ಷವಾದ ನಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕಿತ್ತು ಎಂದು ಕಾಂಗ್ರೆಸ್ ಟೀಕಿಸಿದೆ.
Advertisement
Goa: 11 leaders, including Sudin Dhavalikar of Maharashtrawadi Gomantak Party and Vijai Sardesai of Goa Forward Party, also take oath at the Raj Bhavan as cabinet ministers. pic.twitter.com/TQzT6WaasO
— ANI (@ANI) March 18, 2019
Advertisement
ಗೋವಾದಲ್ಲಿ ಪಕ್ಷಗಳ ಬಲಾಬಲ ಹೇಗಿದೆ?
40 ಶಾಸಕರನ್ನು ಹೊಂದಿರುವ ಗೋವಾ ವಿಧಾನಸಭೆ ಸಂಖ್ಯೆ 36ಕ್ಕೆ ಇಳಿದಿದ್ದು, 19 ಶಾಸಕರನ್ನು ಹೊಂದಿರುವ ಪಕ್ಷ ಅಥವಾ ಮೈತ್ರಿ ಸರ್ಕಾರ ರಚಿಸಬಹುದು. ಬಿಜೆಪಿ-12, ಮಹಾರಾಷ್ಟ್ರ ಗೋಮಂತಕ ಪಕ್ಷ-3, ಗೋವಾ ಪಾರ್ವರ್ಡ್ ಪಕ್ಷ-3, ನಿರ್ದಲಿಯ-3, ಕಾಂಗ್ರೆಸ್-14 ಮತ್ತು ಎನ್‍ಎಸ್‍ಪಿ-1 ಒಳಗೊಂಡಂತೆ 36 ಶಾಸಕರನ್ನು ಗೋವಾ ವಿಧಾನಸಭೆ ಹೊಂದಿದೆ. ಎಂಜಿಪಿ, ಜಿಎಫ್ ಪಿ ಯಿಂದ ತಲಾ ಮೂವರು ಹಾಗೂ ಮೂವರು ಪಕ್ಷೇತರರ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿದೆ.
Advertisement
Goa: Pramod Sawant takes oath as the new Chief Minister of the state, at the Raj Bhavan. pic.twitter.com/bFq1j1B80t
— ANI (@ANI) March 18, 2019