ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರಿಗೆ ʼಝಡ್ʼ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಕಲ್ಪಿಸಲಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯಿಂದ 24 ಗಂಟೆಗಳ ಕಾಲ ‘Z’ ಶ್ರೇಣಿಯ ಸಶಸ್ತ್ರ ಭದ್ರತೆಯನ್ನು ಸರ್ಕಾರ ಒದಗಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ನೆಲ ಗುಡಿಸಿದ ದ್ರೌಪದಿ ಮುರ್ಮು
ಮಂಗಳವಾರ ಸಂಜೆ ಗೃಹ ಸಚಿವಾಲಯದಿಂದ ಬಂದ ಆದೇಶದ ನಂತರ ಸಿಆರ್‌ಪಿಎಫ್ ಬುಧವಾರ ಬೆಳಿಗ್ಗೆಯಿಂದ ಮುರ್ಮು ಅವರಿಗೆ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಜೆಪಿಯು ಜಾರ್ಖಂಡ್‌ನ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರನ್ನು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ಮಂಗಳವಾರ ಹೆಸರಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.