Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

Bengaluru City

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

Public TV
Last updated: February 21, 2026 3:16 pm
Public TV
Share
3 Min Read
BJP Protest Across The Country Against Congress Half Naked Protest
SHARE

– ಕರ್ನಾಟಕದಲ್ಲೂ ಕಾಂಗ್ರೆಸ್ ವಿರುದ್ಧ ರಣಕಹಳೆ

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ (India AI Impact Summit) ಇಡೀ ಜಗತ್ತಿನ ಗಮನ ಸೆಳೆದಿದೆ. ಆದರೆ, ಶೃಂಗಸಭೆಯ ಕೊನೆಯ ದಿನ ಯುವ ಕಾಂಗ್ರೆಸ್ ಪಕ್ಷದ 10 ಕಾರ್ಯಕರ್ತರು ಅಂಗಿ ತೆಗೆದು ಅರೆಬೆತ್ತಲೆಯಾಗಿ ಪ್ರತಿಭಟನೆ (Congress Half Naked Protest) ನಡೆಸಿದ್ದು, ಬಿಜೆಪಿಗರ ಕಣ್ಣು ಕೆಂಪಾಗಿಸಿದೆ. ಶೃಂಗಸಭೆ ನಡೆಯುತ್ತಿರುವ ಸ್ಥಳದಲ್ಲೇ ಹತ್ತು ಮಂದಿ ದಿಢೀರನೇ ಶರ್ಟ್ ಬಿಚ್ಚಿ, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಕಾಂಗ್ರೆಸ್ಸಿಗರ ಈ ವರ್ತನೆಯನ್ನು ಖಂಡಿಸಿ ಬಿಜೆಪಿ (BJP) ಟೀಮ್ ಇಂದು ದೇಶಾದ್ಯಂತ ಪ್ರತಿಭಟನೆಗೆ ಇಳಿದಿದೆ.

ದೆಹಲಿ, ಮುಂಬೈ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಬೆಂಕಿ ಉಗುಳುತ್ತಿದ್ದಾರೆ. ದೇಶದ ಹಲವೆಡೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದರು. ಇದೇ ಸಂದರ್ಭದಲ್ಲಿ ಭಾರೀ ಹೈಡ್ರಾಮಾ ನಡೆಯಿತು. ಇದನ್ನೂ ಓದಿ: 5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ದೆಹಲಿ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಥಾಣೆಯಲ್ಲಿ ರಾಹುಲ್ ಗಾಂಧಿಗೆ ಕಪ್ಪುಪಟ್ಟಿ ಪ್ರದರ್ಶಿಸಲಾಯಿತು. ಇದಲ್ಲದೇ ಮುಂಬೈ, ಸೂರತ್, ಜೈಪುರ್, ಜಮ್ಮುವಿನಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಭಾರೀ ಹೈಡ್ರಾಮಾ ಸೃಷ್ಟಿಸಿತು. ಇದನ್ನೂ ಓದಿ: ಕಾರಿನಲ್ಲಿ ತೆರಳುತ್ತಿದ್ದ ರಾಹುಲ್‌ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

Bengaluru BJP Protest Against Congress Half Naked Protest

ಬೆಂಗಳೂರು, ಬೆಳಗಾವಿ, ಬಳ್ಳಾರಿಯಲ್ಲಿ ಪ್ರತಿಭಟನೆ:
ದೆಹಲಿಯ ಎಐ ಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಬೆಂಗಳೂರಿನಲ್ಲೂ ಬಿಜೆಪಿಗರು ಪ್ರತಿಭಟನೆ ನಡೆಸಿದರು. ನಗರದ ಫ್ರೀಡಂಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಶಾಸಕ ಸಿ.ಕೆ ರಾಮಮೂರ್ತಿ, ಸಪ್ತಗಿರಿಗೌಡ, ಎಸ್ ಹರೀಶ್, ಧೀರಜ್ ಮುನಿರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಭಾರತ್ ಮಂಟಪಮ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಅರೆಬೆತ್ತಲೆ ಪ್ರತಿಭಟನೆಗೆ ಖಂಡನೆ ವ್ಯಕತಪಡಿಸಿದರು. ಈ ವೇಳೆ ಭಾರೀ ಹೈಡ್ರಾಮಾ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪ್ರತಿಭಟನಾಕಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇದನ್ನೂ ಓದಿ: ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ಮಗು ಸೇರಿ ನಾಲ್ವರು ದುರ್ಮರಣ

ಇನ್ನು, ಕಾಂಗ್ರೆಸ್ಸಿಗರ ಪ್ರತಿಭಟನೆಯನ್ನು ಶಾಸಕ ಆಶ್ವಥ್ ನಾರಾಯಣ ಟೀಕಿಸಿದರು. ಯೂತ್ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆಯು ಚೀಪ್ ಪಬ್ಲಿಟಿಸಿ ಕೆಲಸ ಅಂದರು. ಇದೆಲ್ಲ ಬಿಜೆಪಿ ಸಂಪೂರ್ಣವಾಗಿ ಖಂಡಿಸುತ್ತೆ. ಕಾಂಗ್ರೆಸ್ ಪಕ್ಷದ ನಾಯಕರಿಗೆ ಒಳ್ಳೆಯದಾಗೋದನ್ನ ಸಹಿಸಲಾಗುತ್ತಿಲ್ಲ. ನಾವು ಒಳ್ಳೆಯದನ್ನು ಮಾಡಲ್ಲ, ಮಾಡೋದನ್ನ ಸಹಿಸಲ್ಲ ಅನ್ನುವಂತೆ ಮಾಡಿದ್ದಾರೆ. ದೇಶಕ್ಕೆ ಅಗೌರವ ಕೊಡುವ ದೇಶದ್ರೋಹ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು. ಜೊತೆಗೆ ಯುವ ಕಾಂಗ್ರೆಸ್ಸಿಗರು ತಮ್ಮ ವರ್ತನೆಗೆ ಬೇಷರತ್ ಕ್ಷಮೆ ಕೇಳಲಿ ಎಂದು ಬಿಜೆಪಿಗರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

Belagavi BJP Protest Against Congress Half Naked Protest

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸಿದ್ದಾರೆ. ಚನ್ನಮ್ಮ ವೃತ್ತದಿಂದ ಕಾಂಗ್ರೆಸ್ ಕಚೇರಿಗೆ ವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿಗೆ ನುಗ್ಗಲು ಹೊರಟ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಇದನ್ನೂ ಓದಿ: ಗೃಹ ಸಚಿವರ ತವರಲ್ಲಿ ಅಸ್ಪೃಶ್ಯತೆ ಜೀವಂತ – ದೇವರು ಬಂದಂತೆ ನಾಟಕವಾಡಿ ದಲಿತರನ್ನ ದೇವಾಲಯದಿಂದ ಹೊರಕಳಿಸಿದ ಗ್ರಾಮಸ್ಥ

ಹುಬ್ಬಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಯಲ್ಲಿ ಹೈಡ್ರಾಮಾ ನಡೆಯಿತು. ಕಾರವಾರ ರಸ್ತೆಯಲ್ಲಿನ ಕಾಂಗ್ರೆಸ್ ಜಿಲ್ಲಾಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಅದೇ ರೀತಿ ಬಳ್ಳಾರಿಯ ರಾಯಲ್ ಸರ್ಕಲ್‌ನಲ್ಲಿ ಬಿಜೆಪಿಗರು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪತಿ ಸಾವಿನ ಬಳಿಕ ಪೇದೆ ಕಾಟ, ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ – ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ

TAGGED:bjpcongressIndia AI Impact SummitkarnatakaNew DelhiRahul Gandhiಕರ್ನಾಟಕಕಾಂಗ್ರೆಸ್ನವದೆಹಲಿಬಿಜೆಪಿಭಾರತ ಎಐ ಇಂಪ್ಯಾಕ್ಟ್‌ ಶೃಂಗಸಭೆರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Cyber Crime
Crime

ಸೈಬರ್ ವಂಚಕರ ಹೊಸ ಗೇಮ್ ಪ್ಲಾನ್ – ಮ್ಯಾರಥಾನ್ ಹೆಸರಲ್ಲಿ ಅಕೌಂಟ್‌ನ ಹಣಕ್ಕೆ ಕನ್ನ ಹಾಕಲು ಯತ್ನ

Public TV
By Public TV
14 minutes ago
Telangana Man Kills Pregnant Wife
Crime

ಗಂಡು ಮಗು ಆಗ್ಲಿಲ್ಲ ಅಂತ ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣುಮಕ್ಕಳ ಹತ್ಯೆಗೈದ ಪಾಪಿ

Public TV
By Public TV
1 hour ago
Telangana Couple Suicide Inter Caste Marriage
Crime

ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮನೆಯವರ ವಿರೋಧ – ನವದಂಪತಿ ಆತ್ಮಹತ್ಯೆ

Public TV
By Public TV
1 hour ago
Hardik Pandya
Cricket

IPL 2026 | DC vs MI ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡ್ತಿಲ್ಲ ಯಾಕೆ?

Public TV
By Public TV
1 hour ago
Vatal Nagaraj Tamate Protest
Districts

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

Public TV
By Public TV
2 hours ago
US Israeli strikes on Irans Bushehr nuclear plant
Latest

ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?