ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸಭಾಧ್ಯಕ್ಷರಾಗಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ (Rahul Narvekar) ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಮಹಾ ವಿಕಾಸ್ ಅಘಾಡಿ (MVA) ಮೈತ್ರಿಕೂಟ ಸ್ಪರ್ಧೆ ನೀಡದಿರಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ನಾರ್ವೇಕರ್ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
14ನೇ ವಿಧಾನಸಭೆಯಲ್ಲಿ ಎರಡೂವರೆ ವರ್ಷಗಳ ಕಾಲ ಸ್ಪೀಕರ್ ಆಗಿದ್ದ ರಾಹುಲ್ ಶಿವಸೇನೆ ಮತ್ತು ಎನ್‌ಸಿಪಿಗೆ ಪ್ರಮುಖ ತೀರ್ಪುಗಳನ್ನು ನೀಡಿದ್ದರು. ಈ ಬಾರಿ ಮುಂಬೈನ ಕೊಲಾಬಾ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸದೂಟ: ಬಜರಂಗದಳ ಪ್ರತಿಭಟನೆ
Advertisement
Advertisement
ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಭಾನುವಾರ ನಾಮಪತ್ರ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವನಕುಳೆ, ಚಂದ್ರಕಾಂತ ಪಾಟೀಲ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
Advertisement
ಡಿಸೆಂಬರ್ 9 ರಂದು ಮಧ್ಯಾಹ್ನ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇದಕ್ಕೆ ತಯಾರಿ ಶುರುವಾಗಿದೆ. ಈ ನಡುವೆ ಮಹಾ ವಿಕಾಸ್ ಅಘಾಡಿ ನಾಯಕರು ವಿಧಾನಸಭೆಯಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Advertisement
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಮೂರು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನ (ಶನಿವಾರ) ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಬಹಿಷ್ಕರಿಸಿದ್ದರು. ಇದನ್ನೂ ಓದಿ: `ಮಹಾ’ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ನಾಯಕರಾದ ನಾನಾ ಪಟೋಲೆ, ವಿಜಯ್ ವಾಡೆತ್ತಿವಾರ್ ಮತ್ತು ಅಮಿತ್ ದೇಶಮುಖ್, ಎನ್‌ಸಿಪಿ-ಎಸ್‌ಪಿಯ ಅಮಿತ್ ದೇಶಮುಖ್ ಮತ್ತು ಶಿವಸೇನೆಯ (ಯುಬಿಟಿ) ಆದಿತ್ಯ ಠಾಕ್ರೆ ಸೇರಿದಂತೆ ಕೆಲವು ಶಾಸಕರು ಇಂದು ಸದನದ ಕಲಾಪ ಪ್ರಾರಂಭವಾದ ಕೂಡಲೇ ಪ್ರಮಾಣ ವಚನ ಸ್ವೀಕರಿಸಿದ್ದರು. ಇದನ್ನೂ ಓದಿ: ಇನ್ಸ್ಟಾದಲ್ಲೇ 3 ವರ್ಷ ಲವ್; ಅಡ್ರೆಸ್ ಇಲ್ಲದ ಕಲ್ಯಾಣದ ಮಂಟಪದಲ್ಲಿ ಮದುವೆ ಫಿಕ್ಸ್ ಮಾಡಿ ವಧು ಎಸ್ಕೇಪ್!