ಡೆಹ್ರಾಡೂನ್: ಪಂಚರಾಜ್ಯ ಚುನಾವಣೆಯಲ್ಲಿ ಸರಳ ಬಹುಮತ ಗಳಿಸಿದ್ದ ಉತ್ತರಾಖಂಡ್ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರದ ಗದ್ದುಗೆ ಏರಿದೆ. ಉತ್ತರಾಖಂಡ್‍ನ 9ನೇ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಗದ್ದುಗೆ ಏರಿದ್ದಾರೆ.
Advertisement
ರಾಜ್ಯಪಾಲರಾದ ಕೃಷ್ಣ ಕಾಂತ್ ಪೌಲ್ ಪ್ರಮಾಣ ವಚನ ಬೋಧನೆ ಮಾಡಿದ್ರು. ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು ಭಾಗಿಯಾಗಿದ್ರು.
Advertisement
Advertisement
ದೀರ್ಘ ಕಾಲ ಆರ್‍ಎಸ್‍ಎಸ್ ಪ್ರಚಾರಕರಾಗಿ ಕೆಲಸ ಮಾಡಿರುವ ತ್ರಿವೇಂದ್ರ ಸಿಂಗ್ ರಾವತ್ ಕಳೆದ ಬಾರಿಯ ಲೋಕಸಭಾ ಚುನಾವಣೆ ವೇಳೆ ಅಮಿತ್ ಷಾ ಜೊತೆಗೂಡಿ ಸಾಕಷ್ಟು ಕೆಲಸ ಮಾಡಿದ್ರು. ತ್ರಿವೇಂದ್ರ ಸಿಂಗ್ ರಾವತ್ ಜೊತೆ ಎಲ್ಲರೂ ಈಶ್ವರನ ಹೆಸರಲ್ಲಿ ಪ್ರಮಾಣ ಸ್ವೀಕಾರ ಮಾಡಿದ್ದು ವಿಶೇಷವಾಗಿತ್ತು. ನಿರ್ಗಮಿತ ಸಿಎಂ ಹರೀಶ್ ರಾವತ್ ಕೂಡ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭಹಾರೈಸಿದ್ರು.
Advertisement
ಉತ್ತರಾಖಂಡ್‍ನಲ್ಲಿ 70 ಸ್ಥಾನಗಳಲ್ಲಿ 57 ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು.